ADVERTISEMENT

ಕೋವಿಡ್: 5 ಪ್ರಕರಣಗಳು ದೃಢಪಟ್ಟರೆ ಕ್ಲಸ್ಟರ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 17:15 IST
Last Updated 19 ಜನವರಿ 2022, 17:15 IST
ವೈರಸ್‌–ಪ್ರಾತಿನಿಧಿಕ ಚಿತ್ರ
ವೈರಸ್‌–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್‌ನ ಐದು ಅಥವಾ ಅದಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುವ ಸ್ಥಳವನ್ನು ಕ್ಲಸ್ಟರ್ ಎಂದು, 15 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದೃಢಪಡುವ ಪ್ರದೇಶವನ್ನು ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸುವಂತೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ. 

ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ, ಒಂದು ಅಥವಾ ಅದಕ್ಕಿಂತ ಹೆಚ್ಚು ಮನೆಗಳಲ್ಲಿ ಪ್ರಕರಣಗಳು ವರದಿಯಾದಲ್ಲಿ, ಸದರಿ ಸಾಲಿನಲ್ಲಿರುವ ಎಲ್ಲ ಮನೆಗಳು ಅಥವಾ 50 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಿಗೆ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಲಾಗಿದೆ. 

ಅಪಾರ್ಟ್‌ಮೆಂಟ್ ವಸತಿ ಸಮುಚ್ಛಯಗಳಲ್ಲಿ ಪ್ರಕರಣಗಳು ವರದಿಯಾದಲ್ಲಿ ಆಯಾ ಮಹಡಿಗಳಿಗೆ ನಿರ್ಬಂಧ ವಿಧಿಸಬೇಕು. ಇಂತಹ ಪ್ರದೇಶವನ್ನು ಮೈಕ್ರೊ ಕಂಟೈನ್ಮೆಂಟ್ ವಲಯವೆಂದು ಘೋಷಿಸಬೇಕು. ಪ್ರಕರಣಗಳು ದೃಢಪಟ್ಟ ಏಳು ದಿನಗಳ ಬಳಿಕ ಹೊಸದಾಗಿ ಪ್ರಕರಣಗಳು ಪತ್ತೆಯಾಗದಿದ್ದರೆ ನಿರ್ಬಂಧಗಳನ್ನು ತೆರವು ಮಾಡಬಹುದು ಎಂದು ತಿಳಿಸಲಾಗಿದೆ. 

ADVERTISEMENT
ಸಾರಾಂಶ

ಕೋವಿಡ್‌ನ ಐದು ಅಥವಾ ಅದಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುವ ಸ್ಥಳವನ್ನು ಕ್ಲಸ್ಟರ್ ಎಂದು, 15 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದೃಢಪಡುವ ಪ್ರದೇಶವನ್ನು ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸುವಂತೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.