ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೂ ಆಡಳಿತ ಸುಧಾರಣೆ ಕಂಡಿಲ್ಲ. ರಾಜ್ಯದಲ್ಲಿ ಏನೂ ಬದಲಾವಣೆ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ ನೀತಿಯಿಂದ ಜನ ಭ್ರಮನಿರಸನಗೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೆ ಏರಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನರು ಕೋಪ - ತಾಪ ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.
'ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಯುವಕರು, ರೈತರು, ವರ್ತಕರಿಗೆ ಬಿಜೆಪಿ ಆಡಳಿತದಲ್ಲಿ ಅನ್ಯಾಯವಾಗಿದೆ' ಎಂದು ಆರೋಪಿಸಿದರು. ಕಾಂಗ್ರೆಸಿನ ಒಳಜಗಳದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಲಿಲ್ಲ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೂ ಆಡಳಿತ ಸುಧಾರಣೆ ಕಂಡಿಲ್ಲ. ರಾಜ್ಯದಲ್ಲಿ ಏನೂ ಬದಲಾವಣೆ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.