ADVERTISEMENT

ಇದೇ 21 ರಿಂದ ಹಿಂಗಾರು ಪ್ರವೇಶ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 17:30 IST
Last Updated 18 ಅಕ್ಟೋಬರ್ 2021, 17:30 IST

ಬೆಂಗಳೂರು: ‘ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು, ಅ.21 ರಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ಉಸ್ತುವಾರಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದರು.

‘ಮುಂಗಾರು ಚುರುಕುಗೊಂಡಿದ್ದರಿಂದ ರಾಜ್ಯದಲ್ಲಿ ಒಂದು ವಾರದಿಂದ ಬಿಡದೇ ಮಳೆ ಬಂದಿತ್ತು. ಸದ್ಯ ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಂಭವ ಕಡಿಮೆ. ಅ.21 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ’ ಎಂದರು. 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರ್ಕಳ, ಅಂಕೋಲಾ, ಚಿಕ್ಕಮಗಳೂರು, ಹರಪನಹಳ್ಳಿ, ತಿಪಟೂರು, ಕುಣಿಗಲ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಸಾರಾಂಶ

‘ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು, ಅ.21 ರಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ಉಸ್ತುವಾರಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.