ADVERTISEMENT

ದೇಶದಲ್ಲಿ ಹಸಿದವರ ಸಂಖ್ಯೆ ಹೆಚ್ಚಳ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಪ್ರಜಾವಾ‌ಣಿ ವೆಬ್ ಡೆಸ್ಕ್‌
Published 15 ಅಕ್ಟೋಬರ್ 2021, 8:28 IST
Last Updated 15 ಅಕ್ಟೋಬರ್ 2021, 8:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ದಸರಾ ಹಬ್ಬದ ಸಡಗರದ ನಡುವೆ ಭಾರತದಲ್ಲಿ ಹಸಿದವರ ಸಂಖ್ಯೆ ಹೆಚ್ಚಿರುವ ವಿಷಾದಕರ ಸಂಗತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 94ನೇ ಸ್ಥಾನದಿಂದ 101ನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತಲೂ ಹಸಿವು, ಅಪೌಷ್ಟಿಕತೆ ಹೊಂದಿರುವುದು ಕಳವಳಕಾರಿ ಸಂಗತಿ.  ಮೋದಿಯವರ ‘ನಹೀ ಖಾನೇ ದೂಂಗಾ’ ಮಾತಿನ ಅಸಲಿ ಅರ್ಥ ಇದೇ ಏನೋ!’ ಎಂದು ವ್ಯಂಗ್ಯವಾಡಿದೆ.

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.

ADVERTISEMENT

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್‌ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂಕ್‌ ಪಡೆದಿವೆ.

ಸಾರಾಂಶ

‘ದಸರಾ ಹಬ್ಬದ ಸಡಗರದ ನಡುವೆ ಭಾರತದಲ್ಲಿ ಹಸಿದವರ ಸಂಖ್ಯೆ ಹೆಚ್ಚಿರುವ ವಿಷಾದಕರ ಸಂಗತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.