ADVERTISEMENT

ಅ.13 ರಿಂದ 15ರವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 19:32 IST
Last Updated 12 ಅಕ್ಟೋಬರ್ 2021, 19:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಅಲರ್ಟ್‌?: ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇದೇ 15ರವರೆಗೆ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ.

ADVERTISEMENT

ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ಮಳೆ ಎಲ್ಲಿ, ಎಷ್ಟು?: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ 18 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಶಿರಾ 12, ಮಧುಗಿರಿ 9, ನಿಪ್ಪಾಣಿ, ಹೊಸಕೋಟೆ, ಪಾವಗಡ 7, ಮದ್ದೂರು, ಶಿಡ್ಲಘಟ್ಟ 6, ಮಂಗಳೂರು, ಬೆಳ್ತಂಗಡಿ, ಗೌರಿಬಿದನೂರು, ಚನ್ನಪಟ್ಟಣ 5, ಹಾಸನ, ಮಳವಳ್ಳಿ 4, ಗೋಕರ್ಣ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ನೆಲಮಂಗಲ, ತೊಂಡೆಬಾವಿ, ಮಾಗಡಿ, ಕನಕಪುರ 3, ಹುಕ್ಕೇರಿ, ಚಾಮರಾಜನಗರ, ಕುಣಿಗಲ್ 2, ಪುತ್ತೂರು, ಕಾರ್ಕಳ, ಮಡಿಕೇರಿ, ಮಂಡ್ಯ, ಚಿಂತಾಮಣಿ, ತಿಪಟೂರು ಹಾಗೂ ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಸಾರಾಂಶ

ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.