ADVERTISEMENT

ಸಲೀಂ-ಉಗ್ರಪ್ಪ ಸಂಭಾಷಣೆ: ನಾನು ಯಾರನ್ನೂ ದೂಷಿಸುವುದಿಲ್ಲ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 7:54 IST
Last Updated 14 ಅಕ್ಟೋಬರ್ 2021, 7:54 IST
ಶಿವಕುಮಾರ್‌
ಶಿವಕುಮಾರ್‌   

ಬೆಂಗಳೂರು: ‘ಪಕ್ಷದ ಮುಖಂಡರಾದ ಸಲೀಂ ಹಾಗೂ ವಿ.ಎಸ್. ಉಗ್ರಪ್ಪ ಅವರ ಸಂಭಾಷಣೆ, ನಂತರದ ಬೆಳವಣಿಗೆಗಳ ಬಗ್ಗೆ ನಾನು ಯಾರನ್ನೂ ದೂಷಿಸುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನನ್ನ ಬಗ್ಗೆ ಯಾರು, ಯಾವ ರೀತಿ ಮಾತಾಡಬೇಕೋ ಮಾತನಾಡಿದ್ದಾರೆ. ಅದನ್ನು ಯಾರು ಯಾವ ರೀತಿ ಬಳಸಿಕೊಳ್ಳಬೇಕೋ, ಬಳಸಿಕೊಂಡಿದ್ದಾರೆ. ನಾನು ಬಿಜೆಪಿ ಅವರನ್ನಾಗಲಿ, ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಬಳಸಿಕೊಂಡಿದ್ದಾರೆ’ಮೆಂದರು.

ಕಾಂಗ್ರೆಸ್ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಅವರು, 'ಯಾರು ಏನು ಮಾತನಾಡುತ್ತಾರೋ ಮಾತಾಡಲಿ. ಕಳೆದ ಎರಡು ವರ್ಷಗಳಿಂದ ಯಾರು ಏನೆಲ್ಲಾ ಮಾತನಾಡಿದ್ದಾರೆ ಅದನ್ನೂ ನೋಡಲಿ. ಎಚ್. ವಿಶ್ವನಾಥ್, ಯೋಗೀಶ್ವರ್, ಮಂಚದ ಮೇಲೆ ರಮೇಶ ಜಾರಕಿಹೊಳಿ ಅವರು ಮಾತನಾಡಿದರಲ್ಲಾ.., ಅದಕ್ಕೆ ಉತ್ತರ ಯಾಕಿಲ್ಲ? ಯತ್ನಾಳ್ ಅವರ ಹೇಳಿಕೆಗೆ ಸಿ.ಟಿ ರವಿ ಅವರಾಗಲಿ, ಈಗ ಮಾತನಾಡುತ್ತಿರುವವರಾಗಲಿ ಯಾಕೆ ಉತ್ತರ ನೀಡಲಿಲ್ಲ. ಯಡಿಯೂರಪ್ಪ, ವಿಜಯೇಂದ್ರ ಕಲೆಕ್ಷನ್, ಅವರ ಮೊಮ್ಮಗನ ಬಗ್ಗೆ ಮಾತನಾಡಿದಾಗ ಇವರ ಧ್ವನಿ ಏನು ಬಿದ್ದು ಹೋಗಿತ್ತಾ? ಆಗ ಏಕೆ ಮಾತನಾಡಲಿಲ್ಲ’ ಎಂದು ಪ್ರಶ್ನಿಸಿದರು.

ADVERTISEMENT

ಪಕ್ಷ ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ: ಡಿ.ಕೆ. ಶಿವಕುಮಾರ್, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ವೇದಿಕೆ ಮೇಲೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, 'ನಾನು ಪಕ್ಷದ ಅಧ್ಯಕ್ಷ, ಆ ಕೆಲಸ ಮಾಡುತ್ತಿದ್ದೇನೆ. ಅವರು ದೊಡ್ಡ ನಾಯಕರು. ಎಲ್ಲರ ಸಂಪರ್ಕ ಇಟ್ಟುಕೊಂಡಿರುವವರು. ಕಾರ್ಯಕರ್ತರ ಜತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ. ನಾನು ಆ ಬಗ್ಗೆ ಮಾತ್ರ ಯೋಚಿಸುತ್ತೇನೆ ಎಂದರು.

ಸಾರಾಂಶ

‘ಪಕ್ಷದ ಮುಖಂಡರಾದ ಸಲೀಂ ಹಾಗೂ ವಿ.ಎಸ್. ಉಗ್ರಪ್ಪ ಅವರ ಸಂಭಾಷಣೆ, ನಂತರದ ಬೆಳವಣಿಗೆಗಳ ಬಗ್ಗೆ ನಾನು ಯಾರನ್ನೂ ದೂಷಿಸುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.