ಬೆಂಗಳೂರು: ದೇಶದಲ್ಲಿ ಇದುವರೆಗೆ ಬರೋಬ್ಬರಿ 156.76 ಕೋಟಿಗೂ ಅಧಿಕ ಡೋಸ್ ಕೋವಿಡ್ ತಡೆ ಲಸಿಕೆ ವಿತರಿಸಲಾಗಿದೆ ಎಂದು ಕರ್ನಾಟಕ ಬಿಜೆಪಿ ಘಟಕವು ತಿಳಿಸಿದೆ.
ದೇಶದಲ್ಲಿ ಕೋವಿಡ್ ತಡೆ ಲಸಿಕೆ ಅಭಿಯಾನ ಆರಂಭವಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ʼಬಿಜೆಪಿ ಕರ್ನಾಟಕʼ, ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಭಾರತದ ಅರ್ಹ ಜನಸಂಖ್ಯೆಯ ಶೇ 92 ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ದೇಶದ ಶೇ 70 ರಷ್ಟು ಅರ್ಹ ಜನರು ಸಂಪೂರ್ಣ ಲಸಿಕೆ ಪಡೆದಿದ್ದಾರೆʼ ಎಂದು ಮಾಹಿತಿ ನೀಡಿದೆ.
ಮತ್ತೊಂದು ಟ್ವೀಟ್‌ನಲ್ಲಿ, ಭಾರತದ ಲಸಿಕಾ ಅಭಿಯಾನವು ಜಗತ್ತಿನ ಅನೇಕ ಪ್ರಮುಖ ದೇಶಗಳಿಗಿಂತ ವೇಗವಾಗಿ ನಡೆಯುತ್ತಿದೆ. ದೇಶದಲ್ಲಿ ಒಂದು ವರ್ಷದಲ್ಲಿ ಪ್ರತಿದಿನ ಸರಾಸರಿ 4.26 ಮಿಲಿಯನ್ (42.6 ಲಕ್ಷ) ಜನರಿಗೆ ಲಸಿಕೆ ನೀಡಲಾಗಿದೆ ಎಂದೂ ಹೇಳಿದೆ.
ಯುಎಸ್‌ಎ, ಯುಕೆ, ಜರ್ಮನಿ, ಫ್ರಾನ್ಸ್, ರಷ್ಯಾದಂತಹ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಲಸಿಕೆ ನೀಡಲಾಗಿದೆ ಎಂದೂ ಮಾಹಿತಿ ನೀಡಿದೆ.
ದೇಶದಲ್ಲಿ ಇದುವರೆಗೆ ಬರೋಬ್ಬರಿ 156.76 ಕೋಟಿಗೂ ಅಧಿಕ ಡೋಸ್ ಕೋವಿಡ್ ತಡೆ ಲಸಿಕೆ ವಿತರಿಸಲಾಗಿದೆ ಎಂದು ಕರ್ನಾಟಕ ಬಿಜೆಪಿ ಘಟಕವು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.