ADVERTISEMENT

ಸರ್ಕಾರಿ ಕಾರ್ಯಕ್ರಮದಲ್ಲಿ ಆಂಗ್ಲ ಭಾಷೆ ಬಳಕೆ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 17:24 IST
Last Updated 19 ಜನವರಿ 2022, 17:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಐಟಿ ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಮ್ಮಿಕೊಂಡ ರಾಷ್ಟ್ರೀಯ ನವೋದ್ಯಮ ದಿನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷೆ ಬಳಸಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. 

‘ಇದೇ 16ರಂದು ನಡೆದ ರಾಷ್ಟ್ರೀಯ ನವೋದ್ಯಮ ದಿನದ ಕಾರ್ಯಕ್ರಮದ ವೇದಿಕೆ ಮೇಲೆ ಅಳವಡಿಸಲಾದ ಫಲಕ ಸಂಪೂರ್ಣ ಆಂಗ್ಲ ಭಾಷೆಯಲ್ಲಿದೆ. ಇದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜಾರಿಮಾಡಬೇಕು’ ಎಂದು ಒತ್ತಾಯಿಸಿದ್ದಾರೆ. 

ADVERTISEMENT
ಸಾರಾಂಶ

ಐಟಿ ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಮ್ಮಿಕೊಂಡ ರಾಷ್ಟ್ರೀಯ ನವೋದ್ಯಮ ದಿನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷೆ ಬಳಸಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.