ಬೆಂಗಳೂರು: ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
‘₹1 ಲಕ್ಷ ಹಣ ಇಟ್ಟುಕೊಂಡು ಎಟಿಎಂ ಒಂದರ ಬಳಿ ನಿಂತಿದ್ದ ವ್ಯಕ್ತಿಯನ್ನು ಕೆಲ ದಿನಗಳ ಹಿಂದೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆಯಿಂದ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ವಿಷಯ ಬಯಲಾಗಿತ್ತು. ಆತ ನೀಡಿದ ಮಾಹಿತಿ ಆಧಾರದಲ್ಲಿ ಫೈಜಲ್, ಫಜಲ್, ಅಬ್ದುಲ್ ಮುನಾಫ್ ಹಾಗೂ ಮೊಹಮ್ಮದ್ ಸಾಲಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಒಟ್ಟು 2,886 ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದು ವಿಚಾರಣೆಯಿಂದ ಬಯಲಾಗಿತ್ತು. ಹೀಗಾಗಿ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಈ ಜಾಲವು ದೇಶದಾದ್ಯಂತ ವ್ಯಾಪಿಸಿರುವ ಶಂಕೆ ಇದೆ. ಬ್ಯಾಂಕ್ ಖಾತೆದಾರರ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿದೆ. ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿದೆ. ಕೋವಿಡ್ ನೆಪ ಮುಂದಿಟ್ಟು ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ’ ಹೇಳಿದ್ದಾರೆ.
ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.