ಬೆಂಗಳೂರು: ನಷ್ಟದಲ್ಲಿರುವ ಮೈಸೂರಿನ ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಯ ವ್ಯಾಪ್ತಿಯ ಕಬ್ಬನ್ನು ಖರೀದಿಸಿ ಬೇರೆ ಸಕ್ಕರೆ ಕಾರ್ಖಾನೆಗಳಿಗೆ ರವಾನಿಸಲು ನಿರ್ಧರಿಸಲಾಗಿದೆ. 2022ರಿಂದ ಪೂರ್ಣ ಪ್ರಮಾಣದಲ್ಲಿ ಕಬ್ಬು ಅರೆಯಲು ಸಿದ್ಧತೆ ಆರಂಭಿಸುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.
ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, 'ಆಡಳಿತ ನಿರ್ವಹಣೆ ಮತ್ತು ತಾಂತ್ರಿಕ ಸುಧಾರಣೆ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ನೇಮಿಸಲಾಗುವುದು. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದರು.
ಮೈ ಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಎರಡು ವರ್ಷಗಳ ಕಾಲ ಸರ್ಕಾರದ ನಿರ್ವಹಣೆಯಲ್ಲಿ ದೊರೆಯುವ ಫಲಿತಾಂಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರೈತರಿಗೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಾರ್ಖಾನೆ ಆರಂಭಕ್ಕೆ ತಕ್ಷಣದಿಂದಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾರ್ಖಾನೆ ಉಳಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ರೈತ ಮುಖಂಡರು ಸಭೆಯಲ್ಲಿದ್ದರು.
ನಷ್ಟದಲ್ಲಿರುವ ಮೈಸೂರಿನ ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.