ಹುಬ್ಬಳ್ಳಿ: ರಾಹುಲ್ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಿಂದೆ ಹಲವು ಬಾರಿ ಹೇಳಿದ್ದೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಕೇಂದ್ರ ರಾಜಕಾರಣಕ್ಕೆ ಬರುವಂತೆ ನನ್ನನ್ನು ಯಾರೂ ಕರೆದಿಲ್ಲ. ಅದರಲ್ಲಿ ಆಸಕ್ತಿಯೂ ಇಲ್ಲ. ಇದರ ಬಗ್ಗೆ ಚರ್ಚೆಯೂ ಆಗಿಲ್ಲ. ನನಗೀಗ 74 ವರ್ಷ ವಯಸ್ಸು. ಇನ್ನು ಐದು ವರ್ಷ ರಾಜ್ಯದಲ್ಲಿದ್ದುಕೊಂಡೇ ಖುಷಿಯಾಗಿ ರಾಜಕಾರಣ ಮಾಡುತ್ತೇನೆ’ ಎಂದರು.
ಮುಂದಿನ ಮುಖ್ಯಮಂತ್ರಿ ನೀವೇ ಆಗುವಿರಾ ಎನ್ನುವ ಪ್ರಶ್ನೆಗೆ ’ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಯಾರೇ ಸಿ.ಎಂ. ಆದರೂ ನನಗೆ ಖುಷಿಯಿದೆ’ ಎಂದರು.
ಹಬ್ಬದ ಸಮಯದಲ್ಲಿ ಮೆರವಣಿಗೆ ಮಾಡಲು ಆರ್‌ಎಸ್‌ಎಸ್‌ಗೆ ಅನುಮತಿ ಕೊಟ್ಟಿದ್ದೀರಿ. ಅದೇ ರೀತಿ ಈದ್ ಮಿಲಾದ್‌ಗೂ ಮೆರವಣಿಗೆ ಮಾಡಲು ಅನುಮತಿ ಕೊಡಬೇಕು ಎಂದು ಆಗ್ರಹಿಸಿದರು.
ರಾಹುಲ್ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಿಂದೆ ಹಲವು ಬಾರಿ ಹೇಳಿದ್ದೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.