ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ ಅವರು, ‘ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ’ ಎಂದು ತಿಳಿಸಿದರು.
ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ವಿಚಾರವಾಗಿ ದಸರಾ ಮುಗಿದ ಕೂಡಲೇ ತಜ್ಞರ ಸಮಿತಿಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧವೂ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದಾಖಲಿಸಿರುವ ಪ್ರಕರಣಗಳ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.