ADVERTISEMENT

ವಿಜಯೇಂದ್ರಗೆ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ಬಿ.ವೈ. ರಾಘವೇಂದ್ರ

ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದ ಸಂಸದ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 19:32 IST
Last Updated 12 ಅಕ್ಟೋಬರ್ 2021, 19:32 IST
ಬಿ.ವೈ.ರಾಘವೇಂದ್ರ
ಬಿ.ವೈ.ರಾಘವೇಂದ್ರ   

ಶಿವಮೊಗ್ಗ: ‘ಸಹೋದರ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿಲ್ಲ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ನಿರ್ದೇಶನದಂತೆ ವಿಜಯೇಂದ್ರ ಸಂಘಟನೆಯ ಕೆಲಸ ಮಾಡುತ್ತಿದ್ದಾರೆ. ನಾನು ರಾಷ್ಟ್ರ ರಾಜಕಾರಣದಲ್ಲೇ ಮುಂದುವರಿಯುವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನರು ಮೂರು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ರಾಜ್ಯ ರಾಜಕಾ‌ರಣಕ್ಕೆ ಬರುವುದಿಲ್ಲ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡುವೆ’ ಎಂದು ಉತ್ತರಿಸಿದರು.

‘ಪಕ್ಷದ ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣ ಪ್ರವೇಶಿಸುತ್ತೇನೆ’ ಎಂದು ಸೋಮವಾರವಷ್ಟೇ ಅವರು ಹೇಳಿಕೆ ನೀಡಿದ್ದರು.

ADVERTISEMENT
ಸಾರಾಂಶ

‘ಸಹೋದರ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿಲ್ಲ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ನಿರ್ದೇಶನದಂತೆ ವಿಜಯೇಂದ್ರ ಸಂಘಟನೆಯ ಕೆಲಸ ಮಾಡುತ್ತಿದ್ದಾರೆ. ನಾನು ರಾಷ್ಟ್ರ ರಾಜಕಾರಣದಲ್ಲೇ ಮುಂದುವರಿಯುವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನರು ಮೂರು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ರಾಜ್ಯ ರಾಜಕಾ‌ರಣಕ್ಕೆ ಬರುವುದಿಲ್ಲ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡುವೆ’ ಎಂದು ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.