ADVERTISEMENT

ಕೊಲೆ ಪ್ರಕರಣ: ಸಿಬಿಐ ತನಿಖೆ ಪ್ರಶ್ನಿಸಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 16:19 IST
Last Updated 18 ಅಕ್ಟೋಬರ್ 2021, 16:19 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಪ್ರಶ್ನಿಸಿ ವಿನಯ ಕುಲಕರ್ಣಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಿಚಾರಣೆ ಪೂರ್ಣಗೊಂಡರೆ ಸತ್ಯಾಂಶ ಹೊರಗೆ ಬರುತ್ತದೆ. ಹೀಗಾಗಿ, ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯ ಇಲ್ಲ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಎನ್.ಎಸ್. ಸಂಜಯಗೌಡ ಒಳಗೊಂಡ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ಆರೋಪಿಗಳಾದ ವಿನಯ ಕುಲಕರ್ಣಿ, ಬಸವರಾಜ ಶಿವಪ್ಪ ಮುತ್ತಗಿ, ವಿನಾಯಕ್, ಚಂದ್ರಶೇಖರ ಇಂಡಿ ಮತ್ತು ಸೋಮಶೇಖರ್ ಅರ್ಜಿ ಸಲ್ಲಿಸಿದ್ದರು. ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿ 2019 ಸೆಪ್ಟೆಂಬರ್ 6ರಂದು ಸರ್ಕಾರ ಹೊರಡಿಸಿದ್ದ ಆದೇಶ ಮತ್ತು ಅದನ್ನು ಆಧರಿಸಿ ಸಿಬಿಐ ದಾಖಲಿಸಿಕೊಂಡ ಎಫ್‌ಐಆರ್ ಅನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ADVERTISEMENT

ಸ್ಥಳೀಯ ತನಿಖಾಧಿಕಾರಿಗಳು ನ್ಯಾಯಸಮ್ಮತ ತನಿಖೆ ನಡೆಸಿಲ್ಲ. ತನಿಖೆ ದುರ್ಬಲಗೊಳಿಸಿದ ಆರೋಪದಲ್ಲಿ ಅವರನ್ನು ಆರೋಪಿಗಳೆಂದು ಸಿಬಿಐ ಪರಿಗಣಿಸಿದೆ.  ಯಾವುದೇ ಆದೇಶಗಳ ಪ್ರಭಾವಕ್ಕೂ ಒಳಗಾಗದೆ ಸ್ವತಂತ್ರ ತನಿಖೆ ನಡೆಸುವಂತೆ ಪೀಠ ಸಿಬಿಐಗೆ ನಿರ್ದೇಶನ ನೀಡಿತು.

2016ರ ಜೂನ್ 15ರಂದು ಯೋಗೀಶಗೌಡ ಹತ್ಯೆಯಾಗಿತ್ತು. 2020 ನವೆಂಬರ್ 5ರಂದು ವಿನಯ ಕುಲಕರ್ಣಿ ಬಂಧನವಾಗಿತ್ತು.

ಸಾರಾಂಶ

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಪ್ರಶ್ನಿಸಿ ವಿನಯ ಕುಲಕರ್ಣಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.