ADVERTISEMENT

ನೇಪಾಳದಲ್ಲಿ ನದಿಗೆ ಬಸ್‌ ಉರುಳಿ 22 ಪ್ರಯಾಣಿಕರ ಸಾವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 3:33 IST
Last Updated 13 ಅಕ್ಟೋಬರ್ 2021, 3:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು: ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳಗುಂಜ್‌ನಿಂದ ಮುಗು ಜಿಲ್ಲೆಯ ಜಿಲ್ಲಾ ಕೇಂದ್ರವಾದ ಗಾಮಗಧಿಯತ್ತ ತೆರಳುತ್ತಿದ್ದ ಬಸ್ ಛಾಯನಾಥ ರಾರಾ ಪುರಸಭೆ ವ್ಯಾಪ್ತಿಯಲ್ಲಿರುವ ಪಿನಾ ಝ್ಯಾರಿ ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ ದಶಮಿ ಹಬ್ಬ ಆಚರಿಸಲು ದೇಶದ ವಿವಿಧ ಭಾಗಗಳಿಂದ ಮನೆಗೆ ಮರಳುತ್ತಿದ್ದ ಅನೇಕ ಪ್ರಯಾಣಿಕರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಸೇನೆಯ ಹೆಲಿಕಾಪ್ಟರ್ ಅನ್ನು ಸುರಖೇಟಿನಿಂದ ಅಪಘಾತ ನಡೆದ ಸ್ಥಳಕ್ಕೆ ಕಳುಹಿಸಲಾಗಿದೆ.

ADVERTISEMENT
ಸಾರಾಂಶ

ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.