ವಿಜಯನಗರ (ಹೊಸಪೇಟೆ): ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಎಚ್ ಪಿಎಸ್ ಪಿಯು ಕಾಲೇಜಿನಲ್ಲಿ 48 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಹಾಜರಾತಿ ಕೊರತೆ ಹಿನ್ನೆಲೆ ಪರೀಕ್ಷೆಗೆ ಅನುಮತಿ ನೀಡಿಲ್ಲ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಸಿಬ್ಬಂದಿಗಳು ಹೊರಕಳಿಸಿದ್ದು, ನಿನ್ನೆ ಹಾಲ್ ಟಿಕೆಟ್ ನೀಡಿದ್ದ ಕಾಲೇಜು ಆಡಳಿತ ಮಂಡಳಿ, ಇಂದು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳನ್ನು ಹೊರಹಾಕಿದೆ.
ಪರೀಕ್ಷೆಗೆ ಅವಕಾಶ ನೀಡದ್ದನ್ನು ಖಂಡಿಸಿ, ಹರಪನಹಳ್ಳಿ ಸರಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾಲೇಜು ಆಡಳಿತ ಮಂಡಳಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಯಿಂದ ಹೊರ ಹಾಕಿದ್ದಕ್ಕೆ ಸಾರ್ವಜನಿಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಸೂಕ್ತ ಕ್ರಮ ಕೈಗೊಂಡು ಪರೀಕ್ಷೆ ಬರೆಯಲು ಜೊತೆಗೆ ಮುಂದಿನ ವಿಷಯಗಳ ಪರೀಕ್ಷೆಗೆ ಹಾಜರಾಗಲು ಶಿಕ್ಷಣ ಸಚಿವರಿಗೆ ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಯಿಸಿದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುಗೇಂದ್ರ ಅವರು, ಹರಪನಹಳ್ಳಿಯ ಎಚ್ ಪಿಎಸ್ ಪಿಯು ಕಾಲೇಜಿನಲ್ಲಿ 48 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಆಗಿರುವ ಸಮಸ್ಯೆಗೆ ಮೇಲ್ನೋಟಕ್ಕೆ ಪ್ರಾಂಶುಪಾಲರ ನಿರ್ಲಕ್ಷ್ಯ ಕಂಡುಬರುತ್ತಿದೆ. ಹಾಜರಾರಿಎ ಕೊರತೆ ಕುರಿತು ಮೊದಲೇ ಪೋಷಕರಿಗೆ ಮೂರು ಬಾರಿ ನೋಟಿಸ್ ನೀಡಿ ಗಮನಕ್ಕೆ ತರಬೇಕಿತ್ತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.