ಉತ್ತರಪ್ರದೇಶದಲ್ಲಿ,ಮತ್ತೆ ರಾಷ್ಟ್ರಪತಿ ಆಳ್ವಿಕೆ
ನವದೆಹಲಿ, ಅ. 17 (ಪಿಟಿಐ)– ಉತ್ತರಪ್ರದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಬಹುಮತ ಗಳಿಸದೇ ಸರ್ಕಾರ ರಚಿಸಲು ಅಸಮರ್ಥವಾಗಿರುವ ಹಿನ್ನೆಲೆಯಲ್ಲಿ, ವಿಧಾನ ಸಭೆಯನ್ನು ಅಮಾನತಿನಲ್ಲಿರಿಸಿ ಇಂದು ಮಧ್ಯರಾತ್ರಿಯಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸಲಾಗಿದೆ.
ಉತ್ತರಪ್ರದೇಶದ ರಾಜ್ಯಪಾಲ ರೋಮೇಶ್ ಭಂಡಾರಿ ಅವರ ಶಿಫಾರಸಿನ ಮೇರೆಗೆ ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಷ್ಟ್ರಪತಿ ಡಾ.ಶಂಕರ ದಯಾಳ್ ಶರ್ಮಾ ಅವರನ್ನು ಭೇಟಿ ಮಾಡಿ ಉತ್ತರಪ್ರದೇಶದ ರಾಜಕೀಯ ಪರಿಸ್ಥಿತಿಗಳನ್ನು ವಿವರಿಸಿದರು.
ಉತ್ತರಪ್ರದೇಶದಲ್ಲಿ ಮತ್ತೆ ರಾಷ್ಟ್ರಪತಿ ಆಳ್ವಿಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.