ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಮುಂಗಡಪತ್ರದಲ್ಲಿ ಅಡಕವಾಗಿರುವ ಪ್ರಮುಖ 10 ಅಂಶಗಳು ಇಲ್ಲಿವೆ.
ರೈತರಿಗೆ ನೀಡಲಾಗುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ. 25 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ.
ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ. 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
ಹಳ್ಳಿ ಮುತ್ತು ಯೋಜನೆ: ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ, ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾಗುವ 500 ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ಭರಿಸಲು ಕ್ರಮ
ಮನೆಮನೆಗೆ ಆರೋಗ್ಯ ಕಾರ್ಯಕ್ರಮದಡಿ ಗ್ರಾಮೀಣ ಜನತೆಯ ಸಮಗ್ರ ಆರೋಗ್ಯ ತಪಾಸಣೆಗೆ 2023-24ರಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ.
ಮನೆಮನೆಗೆ ಆರೋಗ್ಯ ಕಾರ್ಯಕ್ರಮದಡಿ ಗ್ರಾಮೀಣ ಜನತೆಯ ಸಮಗ್ರ ಆರೋಗ್ಯ ತಪಾಸಣೆಗೆ 2023-24ರಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ.ತಂತ್ರಜ್ಞಾನ
ಆರೋಗ್ಯ ಸೇವೆಗಳ ಡಿಜಿಟಲೀಕರಣ. ರೋಗಿಗಳ ಆರೋಗ್ಯ ದಾಖಲೆಗಳ ಸುರಕ್ಷಿತ ಕ್ರೋಡೀಕರಣಕ್ಕೆ ಕ್ರಮ
ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಹಾಗೂ ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ
ಮಹಿಳಾ ಸಬಲೀಕರಣಕ್ಕೆ ಗೃಹಿಣಿ ಶಕ್ತಿ ಯೋಜನೆ - ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ ₹500 ಸಹಾಯಧನ. 30 ಲಕ್ಷ ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ (1000 ಕೋಟಿ)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.