ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವ ಕೆನಡಾದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭಾರತ, ನವದೆಹಲಿಯಲ್ಲಿರುವ ಕೆನಡಾ ಡೆಪ್ಯುಟಿ ಹೈಕಮಿಷನರ್ ಸ್ಟೀವರ್ಟ್ ವೀಲರ್ ಅವರನ್ನು ಕರೆಸಿ ವಿವರಣೆ ಕೇಳಿದೆ. ಆದರೆ, ‘ಭಾರತ ಕೇಳಿದ ಎಲ್ಲ ಪುರಾವೆಗಳನ್ನು ಒದಗಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ‘ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಏಜೆಂಟರ ಪಾತ್ರ ಇರುವುದನ್ನು ಸಾಬೀತುಪಡಿಸುವ ನಂಬಲರ್ಹ ಪುರಾವೆಗಳನ್ನು ಒದಗಿಸಲಾಗಿದೆ’ ಎಂದು ಅವರು ಸೋಮವಾರ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.