ADVERTISEMENT

ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ಗೆ ಕೋವಿಡ್‌ ಪಾಸಿಟಿವ್

Published 21 ಜನವರಿ 2022, 8:14 IST
Last Updated 21 ಜನವರಿ 2022, 8:14 IST
ಹರ್ಭಜನ್ ಸಿಂಗ್‌
ಹರ್ಭಜನ್ ಸಿಂಗ್‌    

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ. ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ. ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದಾರೆ.

ಆಫ್‌ ಸ್ಪಿನ್ನರ್‌ ಹರ್ಭಜನ್, ಕಳೆದ ವರ್ಷ ಡಿಸೆಂಬರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಭಾರತದ ಪರ ಹರ್ಭಜನ್ 1998ರ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಭಾರತ ಏಕದಿನ ಮತ್ತು ಟಿ–20 ವಿಶ್ವಕಪ್‌ ಜಯಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

103 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಅವರು 417 ವಿಕೆಟ್‌ಗಳನ್ನು ಪಡೆದಿದ್ದಾರೆ. ಭಾರತದ ಪರ ಟೆಸ್ಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

236 ಏಕದಿನ ಪಂದ್ಯಗಳನ್ನು ಆಡಿರುವ ಅವರು 269 ವಿಕೆಟ್‌ ಕಬಳಿಸಿದ್ದಾರೆ. ಟಿ–20 ಮಾದರಿಯಲ್ಲಿ 28 ಪಂದ್ಯಗಳನ್ನಾಡಿ 25 ವಿಕೆಟ್ ಪಡೆದಿದ್ದಾರೆ.

ಸಾರಾಂಶ

ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಅವರಿಗೆ ಕೋವಿಡ್ ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.