ADVERTISEMENT

ಬಿಹಾರದ ಹಲವೆಡೆ ಪಿಎಫ್‌ಐ ಕಾರ್ಯಕರ್ತರ ಮನೆ ಮೇಲೆ ದಾಳ

​ಪ್ರಜಾವಾಣಿ ವಾರ್ತೆ
Published 11 ಮೇ 2023, 10:08 IST
Last Updated 11 ಮೇ 2023, 10:08 IST
<div class="paragraphs"><p>ಎನ್‌ಐಎ</p></div>

ಎನ್‌ಐಎ

   

ಪಟ್ನಾ: ಬಿಹಾರ ರಾಜ್ಯದ ಹಲವು ಕಡೆಗಳಲ್ಲಿ ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಕಚೇರಿಗಳು ಮತ್ತು ಕಾರ್ಯಕರ್ತರ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮುಜ್ಹಾಪುರ, ಪಶ್ಚಿಮ ಚಂಪಾರಣ್ಯ, ದರ್ಬಾಂಗ್‌ ಹಾಗೂ ಮದುಭಾನಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪಿಎಫ್‌ಐ ಕಚೇರಿಗಳು ಹಾಗೂ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. 

ADVERTISEMENT

ಈ ವೇಳೆ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿವಿಧ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಈ ದಾಳಿ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.