ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಭಾನುವಾರ ಟ್ವಿಟರ್ ಅಭಿಯಾನ ಕೈಗೊಂಡಿದ್ದು ಇದಕ್ಕೆ ನೆಟ್ಟಿಗರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಭಾನುವಾರ ಬೆಳಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ. ಇದರ ಜೊತೆಗೆ ವಿಚಾರಸಂಕಿರಣ, ಚಿತ್ರ- ಪತ್ರ ಚಳವಳಿಗಳನ್ನೂ ಸಂಘಟನೆ ಹಮ್ಮಿಕೊಂಡಿದೆ.
ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಕನ್ನಡದಲ್ಲಿ ಯುಪಿಎಸ್‌ಸಿ ಪರೀಕ್ಷೆಗಾಗಿ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಿರುವುದಾಗಿ ಹೇಳಿದ್ದಾರೆ.
ಯುಪಿಎಸ್ ಸಿ ಪರೀಕ್ಷೆಗಳು ಅಕ್ಟೋಬರ್ 10 ರಂದು ನಡೆಯುತ್ತಿದ್ದು ಈ ಬಾರಿಯೂ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆಗಳನ್ನು ಬರೆಯುವ ಅವಕಾಶ ನೀಡದೆ ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ನೋಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಿದೆ,‘ ಎಂದು ಅವರು ಹೇಳಿದ್ದಾರೆ.
ಈ ಅಭಿಯಾನದಲ್ಲಿ ಸಾವಿರಾರು ಕನ್ನಡಿಗರು ಭಾಗವಹಿಸಿದ್ದಾರೆ. ಇದು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ. ಯುಪಿಎಸ್‌ಸಿಯ ಎಲ್ಲಾ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸಬೇಕು ಎಂದು ಒತ್ತಾಯಿಸಿ ಸಾವಿರಾರು ಜನರು ಸರಣಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರಿಗೆ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ. ತಮ್ಮ ಟ್ವಿಟ್ ಅನ್ನು ಯುಪಿಎಸ್‌ಸಿ, ಪ್ರಧಾನಮಂತ್ರಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಭಾನುವಾರ ಟ್ವಿಟರ್ ಅಭಿಯಾನ ಕೈಗೊಂಡಿದ್ದು ಇದಕ್ಕೆ ನೆಟ್ಟಿಗರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.