ಕಲಬುರಗಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮೊದಲ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದರು.
ಸಚಿವರಾದ ವಿ. ಸೋಮಣ್ಣ, ನಾರಾಯಯಣಗೌಡ ಅವರು ಪಕ್ಷ ಬಿಡುವ ಬಗ್ಗೆ ಮಾಹಿತಿ ಇಲ್ಲ. ಪಕ್ಷದಿಂದ ಹೋಗುವವರು ಹೋಗಬಹುದು. ಬರುವವರು ಬರಬಹುದು ಎಂದರು.
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಘೋಷಣೆ ಮಾಡಿದ್ದೆ. ಅದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ.ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ
ರಾಜ್ಯದಾದ್ಯಂತ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, 140 ಸೀಟುಗಳನ್ನು ಪಡೆದು ಸರ್ಕಾರ ರಚಿಸಲಿದ್ದೇವೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಸ್ಪಷ್ಟ ಬಹುಮತ ಬಂದ ಬಳಿಕ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ಕರ್ನಾಟಕದ ರಾಜಧಾನಿ ಯಾವುದು?
ಬೆಂಗಳೂರು
ಮಾರ್ಚ್ 25ರಂದು ಸಮಾರೋಪಕ್ಕೆ ಪ್ರಧಾನಿ ಮೋದಿ
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು.ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.