×
ADVERTISEMENT
ಈ ಕ್ಷಣ :
ADVERTISEMENT

₹ 270 ಲಕ್ಷ ಕೋಟಿಗೆ ತಲುಪಿದ ಮಾರುಕಟ್ಟೆ ಬಂಡವಾಳ ಮೌಲ್ಯ

Published : 13 ಅಕ್ಟೋಬರ್ 2021, 16:41 IST
ಫಾಲೋ ಮಾಡಿ
Comments

ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಆಗಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ₹ 270 ಲಕ್ಷ ಕೋಟಿಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯ ಮಟ್ಟ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ 452 ಅಂಶ ಏರಿಕೆ ಕಂಡಿತು. 60,737 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಐದು ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು 1,547 ಅಂಶ ಏರಿಕೆ ಕಂಡಿದೆ. ಐದು ದಿನಗಳಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 8.52 ಲಕ್ಷ ಕೋಟಿ ಹೆಚ್ಚಳವಾಗಿದೆ.

ಹಬ್ಬದ ಋತು ಶುರುವಾಗಿರುವ ಕಾರಣ ದೇಶದ ಷೇರು ಪೇಟೆಗಳಲ್ಲಿ ಉತ್ಸಾಹದ ವಹಿವಾಟು ನಡೆದಿದೆ. ಆಟೊಮೊಬೈಲ್, ಲೋಹ, ಇಂಧನ ವಲಯದ ಷೇರುಗಳ ಖರೀದಿಗೆ ಜೋರಾಗಿದೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 169 ಅಂಶ ಏರಿಕೆ ಕಂಡಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 15 ಪೈಸೆಯಷ್ಟು ಹೆಚ್ಚಾಗಿದೆ.

ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಆಗಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ₹ 270 ಲಕ್ಷ ಕೋಟಿಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯ ಮಟ್ಟ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT