ಮುಂಬೈ: ದೇಶದ ಷೇರುಪೇಟೆಗಳು ಸತತ ಏಳನೇ ದಿನವೂ ಸಕಾರಾತ್ಮಕವಾಗಿ ವಹಿವಾಟು ಅಂತ್ಯಗೊಳಿಸಿದ್ದು, ಸೋಮವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡವು.

ಐ.ಟಿ., ಬ್ಯಾಂಕ್ ಮತ್ತು ಲೋಹ ವಲಯದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾದವು. ಆದರೆ, ಔಷಧ ಮತ್ತು ವಾಹನ ವಲಯದ ಷೇರುಗಳು ಲಾಭ ಗಳಿಕೆಯ ಒತ್ತಡಕ್ಕೆ ಒಳಗಾಗಿದ್ದರಿಂದ ಸೂಚ್ಯಂಕಗಳ ಓಟ ತುಸು ತಗ್ಗಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಸೆನ್ಸೆಕ್ಸ್) 459 ಅಂಶಗಳ ಜಿಗಿತ ಕಂಡು 61,765 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ದಿನದ ವಹಿವಾಟಿನ ಒಂದು ಹಂತದಲ್ಲಿ 61,963 ಅಂಶಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 138 ಅಂಶ ಹೆಚ್ಚಾಗಿ ಗರಿಷ್ಠ ಮಟ್ಟವಾದ 18,477 ಅಂಶಗಳಿಗೆ ಏರಿಕೆ ಆಯಿತು. ಮಧ್ಯಂತರ ವಹಿವಾಟಿನಲ್ಲಿ 18,543 ಅಂಶಗಳ ದಾಖಲೆ ಮಟ್ಟ ತಲುಪಿತ್ತು.

ದಿನದ ವಹಿವಾಟಿನಲ್ಲಿ ಇನ್ಫೊಸಿಸ್ ಷೇರು ಮೌಲ್ಯ ಶೇಕಡ 4.47ರಷ್ಟು ಗರಿಷ್ಠ ಏರಿಕೆ ಕಂಡಿತು. ಟೆಕ್ ಮಹೀಂದ್ರ, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಐಟಿಸಿ, ಮಾರುತಿ, ಎಸ್‌ಬಿಐ ಮತ್ತು ಎಕ್ಸಿಸ್ ಬ್ಯಾಂಕ್ ಷೇರುಗಳು ಸಹ ಗಳಿಕೆ ಕಂಡುಕೊಂಡವು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲ ದರವು ಶೇ 0.82ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 85.56 ಡಾಲರ್‌ಗಳಿಗೆ ತಲುಪಿದೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 9 ಪೈಸೆ ಇಳಿಕೆ ಆಗಿ ಒಂದು ಡಾಲರ್‌ಗೆ ₹ 75.35ರಂತೆ ವಿನಿಮಯಗೊಂಡಿತು.

ದೇಶದ ಷೇರುಪೇಟೆಗಳು ಸೋಮವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.