ವಾಷಿಂಗ್ಟನ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೊನೋತ್ತರದ ಆರ್ಥಿಕ ಚೇತರಿಕೆ, ಕೋವಿಡ್ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪಾತ್ರ ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಡ್ ಮಾಲ್‌ಪಾಸ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಇರುವ ವಿಶ್ವಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಡೇವಿಡ್ ಅವರನ್ನು ನಿರ್ಮಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್‌ನ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ತೆಗೆದುಕೊಂಡ ಕ್ರಮಗಳು ಹಾಗೂ ಜಾಗತಿಕ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ಭಾರತ ವಹಿಸಿದ ಪ್ರಮುಖ ಪಾತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.

ಅಭಿವೃದ್ಧಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸಲು ಭಾರತಕ್ಕೆ ಸಾಲ ನೀಡುವ ಅವಕಾಶವನ್ನು ಹೆಚ್ಚಿಸಿರುವ ವಿಶ್ವ ಬ್ಯಾಂಕ್ ಸಮೂಹದ ಉಪಕ್ರಮದ ಬಗ್ಗೆ ನಿರ್ಮಲಾ ಅವರು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸಲು ಮತ್ತು ಸದೃಢವಾಗಿ ಹೊರಹೊಮ್ಮಲು ಗಮನಾರ್ಹವಾದ ಸಾಂಸ್ಥಿಕ ಸುಧಾರಣೆಗಳನ್ನು ಸಹ ಭಾರತ ಸರ್ಕಾರವು ತೆಗೆದುಕೊಂಡಿದೆ ಎಂದು ವಿಶ್ವಬ್ಯಾಂಕ್‌ನ ಅಧ್ಯಕ್ಷರಿಗೆ ತಿಳಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೊನೋತ್ತರದ ಆರ್ಥಿಕ ಚೇತರಿಕೆ, ಕೋವಿಡ್ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪಾತ್ರ ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಡ್ ಮಾಲ್‌ಪಾಸ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.