×
ADVERTISEMENT
ಈ ಕ್ಷಣ :
ADVERTISEMENT

ಹೂಡಿಕೆದಾರರ ಅನುಕೂಲಕ್ಕೆ ‘ಸಾರಥಿ’ ಆ್ಯಪ್‌

Published : 19 ಜನವರಿ 2022, 13:55 IST
ಫಾಲೋ ಮಾಡಿ
Comments

ನವದೆಹಲಿ: ಷೇರುಪೇಟೆ ವಹಿವಾಟನ್ನು ಮೊಬೈಲ್‌ ಮೂಲಕ ನಡೆಸುವುದು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ‘ಸಾರಥಿ’ (Saa₹thi) ಎನ್ನುವ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.

ಸೆಬಿ ಅಧ್ಯಕ್ಷ ಅಜಯ್‌ ತ್ಯಾಗಿ ಅವರು ಆ್ಯಪ್‌ ಬಿಡುಗಡೆ ಮಾಡಿ ಮಾತನಾಡಿದರು. ‌ಸೆಕ್ಯುರಿಟಿ ಮಾರುಕಟ್ಟೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಹೂಡಿಕೆದಾರರನ್ನು ಸಬಲಗೊಳಿಸುವ ಉದ್ದೇಶದಿಂದ ಈ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದರು.

ಮಾರುಕಟ್ಟೆಯಲ್ಲಿ ವೈಯಕ್ತಿಕ ಹೂಡಿಕೆದಾರರ ಭಾಗವಹಿಸುವಿಕೆಯು ಈಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ, ಹೆಚ್ಚಿನ ಪ್ರಮಾಣದ ವಹಿವಾಟು ಮೊಬೈಲ್‌ ಮೂಲಕವೇ ನಡೆಯುತ್ತಿದೆ. ಹೀಗಾಗಿ ಅಗತ್ಯ ಮಾಹಿತಿಗಳನ್ನು ಪಡೆಯಲು ಈ ಆ್ಯಪ್‌ ಹೆಚ್ಚು ಉಪಯುಕ್ತವಾಗಲಿದೆ ಎಂದು ಅವರು ತಿಳಿಸಿದರು.

ಕೆವೈಸಿ ಪ್ರಕ್ರಿಯೆ, ವಹಿವಾಟು ಮತ್ತು ಇತ್ಯರ್ಥ, ಮ್ಯೂಚುವಲ್ ಫಂಡ್‌, ಈಚಿನ ಮಾರುಕಟ್ಟೆ ಬೆಳವಣಿಗೆಗಳು, ಹೂಡಿಕೆದಾರರ ಸಮಸ್ಯೆ ಇತ್ಯರ್ಥಪಡಿಸುವ ವ್ಯವಸ್ಥೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಈ ಆ್ಯಪ್‌ ಅರಿವು ಮೂಡಿಸಲಿದೆ.

ಈಗ ಈ ಆ್ಯಪ್‌, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಲಭ್ಯವಿದೆ. ಮುಂಬರುವ ದಿನಗಳಲ್ಲಿ ಕೆಲವು ಪ್ರಾದೇಶಿಕ ಭಾಷೆಗಳಲ್ಲಿಯೂ ಈ ಆ್ಯಪ್‌ ಲಭ್ಯವಾಗಲಿದೆ ಎಂದು ತ್ಯಾಗಿ ತಿಳಿಸಿದ್ದಾರೆ. ಆ್ಯಂಡ್ರಾಯ್ಡ್‌ ಮತ್ತು ಐಒಎಸ್‌ನಲ್ಲಿ ಇದು ಲಭ್ಯವಿದೆ.

ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ‘ಸಾರಥಿ’ ಎನ್ನುವ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT