×
ADVERTISEMENT
ಈ ಕ್ಷಣ :
ADVERTISEMENT

ಮುಂಬೈ: 60 ಸಾವಿರದಿಂದ ಕೆಳಗಿಳಿದ ಸೆನ್ಸೆಕ್ಸ್

Published : 20 ಜನವರಿ 2022, 16:28 IST
ಫಾಲೋ ಮಾಡಿ
Comments

ಮುಂಬೈ: ಐ.ಟಿ., ಇಂಧನ ಮತ್ತು ಹಣಕಾಸು ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ನಕಾರಾತ್ಮಕ ವಹಿವಾಟು ನಡೆಯಿತು.

ರೂಪಾಯಿ ಮೌಲ್ಯ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರು ಮಾರಾಟಕ್ಕೆ ಗಮನ ನೀಡಿದ್ದು ಸಹ ವಹಿವಾಟಿನ ಮೇಲೆ ಪರಿಣಾಮ ಉಂಟುಮಾಡಿತು ಎಂದು ವರ್ತಕರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 634 ಅಂಶ ಇಳಿಕೆ ಆಗಿ 59,464 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 181 ಅಂಶ ಇಳಿಕೆಯಾಗಿ 17,757 ಅಂಶಗಳಿಗೆ ತಲುಪಿತು. ಸೆನ್ಸೆಕ್ಸ್‌ನಲ್ಲಿ ಬಜಾಜ್‌ ಫಿನ್‌ಸರ್ವ್‌ ಷೇರು ಮೌಲ್ಯ ಶೇ 4.57ರಷ್ಟು ಇಳಿಕೆ ಕಂಡಿತು.

ಜಾಗತಿಕ ಹಣದುಬ್ಬರದ ಆತಂಕ ಮತ್ತು ಅಮೆರಿಕದ ಫೆಡರಲ್‌ ರಿಸರ್ವ್ ಬಡ್ಡಿದರ ಹೆಚ್ಚಿಸುವ ಸಾಧ್ಯತೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಗಳಲ್ಲಿ ಸತತ ಮೂರನೇ ದಿನವೂ ವಹಿವಾಟು ಇಳಿಕೆ ಕಾಣುವಂತಾಯಿತು ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 7 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹ 74.51ರಂತೆ ವಿನಿಮಯಗೊಂಡಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.44ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 88.11 ಡಾಲರ್‌ಗಳಿಗೆ ಏರಿಕೆ ಆಗಿದೆ.

ಐ.ಟಿ., ಇಂಧನ ಮತ್ತು ಹಣಕಾಸು ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ನಕಾರಾತ್ಮಕ ವಹಿವಾಟು ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT