×
ADVERTISEMENT
ಈ ಕ್ಷಣ :
ADVERTISEMENT

ಸಂಭ್ರಮದ ರಾಹುಲ್‌ ಗಾಂಧಿ ಜನ್ಮ ದಿನಾಚರಣೆ

ಶೀಘ್ರ ಕೊಳಚೆ ಪ್ರದೇಶದ ಮಕ್ಕಳಿಗೆ ಟೆಂಟ್‌ ಶಾಲೆ ಆರಂಭಿಸಲು ಭರವಸೆ
Published : 7 ಮಾರ್ಚ್ 2023, 11:03 IST
Last Updated : 7 ಮಾರ್ಚ್ 2023, 11:03 IST
ಫಾಲೋ ಮಾಡಿ
Comments

ಅಫಜಲಪುರ: ಇಲ್ಲಿನ ಉಸ್ಮಾನಿಯ ಕಾಲೋನಿ ಬದಿ ಇರುವ ಕೊಳಚೆ ಪ್ರದೇಶದಲ್ಲಿ ತಾಲ್ಲೂಕು ಯುವ ಕಾಂಗ್ರೆಸ್‌ ಘಟಕದವರು ಸೋಮವಾರ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ 46ನೇ ಜನ್ಮ ದಿನವನ್ನು ಆಚರಿಸಲಾಯಿತು.
ತಾಲ್ಲೂಕು ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಪ್ರಕಾಶ ಜಮಾದಾರ ಮಾತನಾಡಿ, ನಾವು ಇವತ್ತು ರಾಹುಲ್‌ ಗಾಂಧಿಯವರ 46ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ. ಕೊಳಚೆ ಪ್ರದೇಶದ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಇಲ್ಲಿರುವ ಸುಮಾರು 60ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದರ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಲಮಡಿಯವರೊಂದಿಗೆ ಮಾತನಾಡಿ ಒಂದು ಟೆಂಟ್‌ ಶಾಲೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಯುವ ಕಾಂಗ್ರೆಸ್‌ ಮುಖಂಡರಾದ ರಾಜು ಎಸ್‌.ಅರಕೇರ, ಪುಂಡಲೀಕ ರೇವೂರ, ಅಜರ ಪಟೇಲ, ಮಲ್ಲು ನೂಲಾ, ಸಚಿನ್‌ ಡಫೇದಾರ, ಸಂತೋಷ ಸಾಸನೇಕರ, ಪ್ರಕಾಶ ಸುನಗಾರ, ಬಾಬು ಬಿರಾದಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT