ಹೊಸಪೇಟೆ(ವಿಜಯನಗರ): ‘ಹೆರಿಗೆ ಸಮಯದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೆಚ್ಚು ರಕ್ತದಾನದಿಂದ ಅವರಿಗೆ ನೆರವು ಸಿಕ್ಕಂತಾಗುತ್ತದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಜನನಿ ಮಹಿಳಾ ಸಬಲೀಕರಣ ಸಮಿತಿಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ರಕ್ತದಾನ ಶ್ರೇಷ್ಠ ಕಾರ್ಯವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ಸಂಸ್ಥೆಯ ವಾರ್ಷಿಕೋತ್ಸವವನ್ನು ಕೇವಲ ಮನರಂಜನೆ ಕಾರ್ಯಕ್ರಮಗಳಿಗೆ ಮೀಸಲಿಡದೆ ರಕ್ತದಾನ ಶಿಬಿರ ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೈದ್ಯೆ ಡಾ.ಸುಲೋಚನಾ ಮಾತನಾಡಿ. ‘ಕಳೆದ ಒಂದು ವರ್ಷದಲ್ಲಿ ಜನನಿ ಸಂಸ್ಥೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅವುಗಳು ನಿರಂತರವಾಗಿ ನಡೆಯುತ್ತಿರಬೇಕು’ ಎಂದರು.

ಜನನಿ ಸಮಿತಿಯ ನೂತನ ಅಧ್ಯಕ್ಷೆಯಾಗಿ ಗೀತಾಶಂಕರ್ ಅವರನ್ನು ಆಯ್ಕೆ ಮಾಡಲಾಯಿತು. 15 ಜನ ಮಹಿಳೆಯರು ಸದಸ್ಯತ್ವ ಸ್ವೀಕರಿಸಿದರು.

ಜಿತೋ ಸಂಸ್ಥೆಯ ಮಹಿಳಾ ಶಾಖಾ ಅಧ್ಯಕ್ಷೆ ಕಾಂಚನ್ ಕವಾಡ್, ಆಯುಷ್ ವೈದ್ಯಾಧಿಕಾರಿ ಡಾ. ಆರತಿ ಸಿ ಹಿರೇಮಠ್, ಜನನಿ ಸಮಿತಿಯ ನಿಕಟಪೂರ್ವ ಅಧ್ಯಕ್ಷೆ ನಾಗವೇಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಕಾರ್ಯದರ್ಶಿ ರಾಜೇಶ್ವರಿ, ಕಾರ್ಯಕಾರಿಣಿ ಸದಸ್ಯರಾದ ಮುಮ್ತಾಜ್ ಮತ್ತು ಶಂಶಾದ್ ಇದ್ದರು.

‘ಹೆರಿಗೆ ಸಮಯದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೆಚ್ಚು ರಕ್ತದಾನದಿಂದ ಅವರಿಗೆ ನೆರವು ಸಿಕ್ಕಂತಾಗುತ್ತದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.