ಹೊಸಪೇಟೆ (ವಿಜಯನಗರ): ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಅವರು ಭಾನುವಾರ ಇಲ್ಲಿಗೆ ಸಮೀಪದ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿಜಯ ವಿಠಲ ದೇವಸ್ಥಾನ, ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಪರಿಶೀಲಿಸಿದರು. ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ವಾಹನಗಳ ನಿಲುಗಡೆ ದೊಡ್ಡ ಸಮಸ್ಯೆಯಾಗಿದೆ. ಅದನ್ನು ಬಗೆಹರಿಸುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಚರ್ಚಿಸಿದರು.

ಅನಂತರ ವಿರೂಪಾಕ್ಷೇಶ್ವರ ದೇವಸ್ಥಾನ ಬಳಿಯ ತುಂಗಭದ್ರಾ ನದಿ ಸ್ನಾನಘಟ್ಟ, ಕಮಲಾಪುರದಲ್ಲಿನ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ಎಎಸ್‌ಐ) ವಸ್ತು ಸಂಗ್ರಹಾಲಯ ವೀಕ್ಷಿಸಿದರು.
ಎಎಸ್‌ಐನ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ್ ದೇಸಾಯಿ, ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಇದ್ದರು.

ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಅವರು ಭಾನುವಾರ ಇಲ್ಲಿಗೆ ಸಮೀಪದ ಹಂಪಿಗೆ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.