ಬೆಳಗಾವಿ: ಮಟ್ಕಾ ಜೂಜಾಟ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುತ್ತಿದ್ದ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ.

ಸಿದ್ಧು ಮೊಕಾಶಿ ಮತ್ತು ವಿಠ್ಠಲ ಚಿಪ್ಪಲಕಟ್ಟಿ ಬಲೆಗೆ ಬಿದ್ದವರು.

ಖಾಸಗಿ ಕೆಲಸಕ್ಕೆಂದು ಖಾನಾಪುರಕ್ಕೆ ಹೋಗಿದ್ದ ಬೆಳಗಾವಿಯ ಪರಶುರಾಮ ಗಾಡಿವಡ್ಡರ ಎನ್ನುವವರ ಮೇಲೆ ಮಟ್ಕಾ ಪ್ರಕರಣ ದಾಖಲಿಸುವುದಾಗಿ ಆ ಕಾನ್‌ಸ್ಟೆಬಲ್‌ಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದಿರಲು ₹ 50ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹ 15ಸಾವಿರಕ್ಕೆ ಒಪ್ಪಿದ್ದರು. ಹೀಗಾಗಿ, ಪರಶುರಾಮ ಅವರು ಎಸಿಬಿಗೆ ಸೋಮವಾರ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಎಸಿಬಿ ಅಧಿಕಾರಿಗಳು, ₹ 15ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಿ ಕಾನ್‌ಸ್ಟೆಬಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಎಸಿಬಿ ಎಸ್ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನೀಲಕುಮಾರ ಮತ್ತು ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.

ಮಟ್ಕಾ ಜೂಜಾಟ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುತ್ತಿದ್ದ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.