‘ಅನೇಕ ಹಳ್ಳಿಗಳಲ್ಲಿ ಬಯಲು ಶೌಚ ಸಮಸ್ಯೆ ಇಂದಿಗೂ ನಿವಾರಣೆ ಆಗಿಲ್ಲ. ಶೌಚಾಲಯಗಳು ಪೂರ್ಣವಾಗಿ ಆಗಿಲ್ಲ. ಆಗಿದ್ದರೂ ಬಳಕೆ ಮಾಡಿಕೊಳ್ಳುತ್ತಿಲ್ಲ. ಮಹಿಳೆಯರು ಮುಜುಗರ ಅನುಭವಿಸುವ ಸ್ಥಿತಿ ಈಗಲೂ ಇದೆ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು. ಸಚಿವರ ಈ ಮಾತು ಜಿಲ್ಲೆಗೂ ಅನ್ವಯಿಸುತ್ತದೆ.