×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ ಗುಂಡಿ ಮುಚ್ಚುವ ಹೆಸರಲ್ಲಿ ಬಿಲ್ ದಂಧೆ: ಕೆ.ಎನ್.ಉಮೇಶ್

ಫಾಲೋ ಮಾಡಿ
Comments

ಬೆಂಗಳೂರು: ‘ಪಾಲಿಕೆ ಮತ್ತು ಸರ್ಕಾರ ನಗರದ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಹೆಸರಿನಲ್ಲಿ ಬಿಲ್ ಮಾಡುವ ದಂಧೆ ನಡೆಸಿರುವ ಕಾರಣ ಗುಂಡಿಗಳಿಗೆ ಹಲವರು ಬಲಿಯಾಗುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು’ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಒತ್ತಾಯಿಸಿದೆ.

‘ಐದು ವರ್ಷಗಳಲ್ಲಿ ಪಾಲಿಕೆ ವ್ಯಾಪ್ತಿಯ ರಸ್ತೆಗಳಿಗಾಗಿ ₹20 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಆದರೂ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲೇ ಇವೆ. ಇದರಿಂದ ಕೇವಲ ಬಿಲ್ ಮತ್ತು ಕಮಿಷನ್‌ಗಾಗಿ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ’ ಎಂದು ಸಿಪಿಎಂನ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಕಾಯ೯ದಶಿ೯ ಕೆ.ಎನ್.ಉಮೇಶ್ ಶಂಕೆ ವ್ಯಕ್ತಪಡಿಸಿದ್ದಾರೆ.

‘ರಸ್ತೆ ಸರಿಪಡಿಸುವಂತೆ ಹೈಕೋರ್ಟ್‌ ನೀಡಿರುವ ಗಡುವು ಮತ್ತು ಎಚ್ಚರಿಕೆಗಳಿಗೆ ಬೆಲೆಯೇ ಇಲ್ಲವಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಮಳೆ ಬಂದಾಗ, ಹಲವು ವಸತಿ ಪ್ರದೇಶಗಳು ಜಲಾವೃತಗೊಳ್ಳುವುದಕ್ಕೆ ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆ ಕೊರತೆಯೇ ಕಾರಣ’ ಎಂದು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್.ಪ್ರತಾಪಸಿಂಹ ದೂರಿದ್ದಾರೆ.

‘ನಗರದಾದ್ಯಂತ ಮಾಡಿರುವ ಒತ್ತುವರಿಯೂ ಈ ಸಮಸ್ಯೆಗೆ ಕಾರಣ. ಕೂಡಲೇ ಎಲ್ಲ ಒತ್ತುವರಿಗಳ ತೆರವಿಗೆ ಅಗತ್ಯ ಕ್ರಮವಹಿಸಬೇಕು’ ಎಂದೂ ಆಗ್ರಹಿಸಿದ್ದಾರೆ.

‘ಪಾಲಿಕೆ ಮತ್ತು ಸರ್ಕಾರ ನಗರದ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಹೆಸರಿನಲ್ಲಿ ಬಿಲ್ ಮಾಡುವ ದಂಧೆ ನಡೆಸಿರುವ ಕಾರಣ ಗುಂಡಿಗಳಿಗೆ ಹಲವರು ಬಲಿಯಾಗುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು’ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಒತ್ತಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT