×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್‌: ನಿರ್ಬಂಧದ ನಡುವೆಯೂ ಭೌತಿಕವಾಗಿ ಪರೀಕ್ಷೆ

Published : 17 ಜನವರಿ 2022, 19:27 IST
ಫಾಲೋ ಮಾಡಿ
Comments

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಬೆಂಗಳೂರು ನಗರ ಜಿಲ್ಲೆಯಲ್ಲಿ ಜ. 31ರವರೆಗೆ ಭೌತಿಕ ತರಗತಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೂ ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌.ಡಿ ಪದವಿಯ ಪರೀಕ್ಷೆಗಳನ್ನು ಸೋಮವಾರ ನಡೆಸಿದೆ.

50ಕ್ಕೂ ಹೆಚ್ಚು ವಿವಿಧ ಸ್ನಾತಕೋತ್ತರ ವಿಭಾಗಗಳ ಸುಮಾರು 700 ವಿದ್ಯಾರ್ಥಿಗಳು ಭೌತಿಕವಾಗಿ ನಡೆದ ಪರೀಕ್ಷೆಗೆ ಹಾಜರಾದರು.

ಎಸ್‌ಎಸ್‌ಎಲ್‌ಸಿ, ಪದವಿಪೂರ್ವ ತರಗತಿ, ಎಂಜಿನಿಯರಿಂಗ್, ವೈದ್ಯಕೀಯ, ಅರೆವೈದ್ಯಕೀಯ ಕೋರ್ಸ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕೋರ್ಸ್‌ಗಳ ಭೌತಿಕ ತರಗತಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಸಾಮಾನ್ಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿನಾಯಿತಿ ನೀಡದೇ ಇದ್ದರೂ, ವಿಶ್ವವಿದ್ಯಾಲಯದ ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ. ಅಲ್ಲದೆ, ಕೆಲವು ಸೋಂಕಿತ ವಿದ್ಯಾರ್ಥಿಗಳು ಕೂಡಾ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೂ, ಅವರು ಇತರರ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ’ ಎಂದು ಪರೀಕ್ಷೆಗೆ ಹಾಜರಾದ ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಪರೀಕ್ಷೆಗಳನ್ನು ನಡೆಸದಂತೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಅಲ್ಲದೆ, ಅಂಥ ಯಾವುದೇ ಆದೇಶ ನಮಗೆ ಬಂದಿಲ್ಲ’ ಎಂದರು.

‘ವರ್ಷದ ಹಿಂದೆಯೇ ಈ ಪರೀಕ್ಷೆ ನಡೆಯಬೇಕಿತ್ತು. ನಾನಾ ಕಾರಣಗಳಿಂದ ವಿಳಂಬವಾಗಿದೆ. ಇನ್ನೂ ವಿಳಂಬವಾದರೆ, ಪಿಎಚ್‌.ಡಿ. ನೋಂದಣಿ ವಿಳಂಬ ಆಗಲಿದೆ. ಅಲ್ಲದೆ, ವಿದ್ಯಾರ್ಥಿಗಳು ಶಿಷ್ಯವೇತನದಿಂದಲೂ ವಂಚಿತರಾಗುವ ಸಾಧ್ಯತೆ ಇದೆ’ ಎಂದೂ ಅವರು ಹೇಳಿದರು.

ಪ್ರಥಮ ವರ್ಷದ ಪಿ.ಎಚ್‌ಡಿ ಕೋರ್ಸ್‌ಗೆ ಪರೀಕ್ಷೆ ಇನ್ನೂ ಮೂರು ದಿನ ನಡೆಯಲಿದೆ. ಪರೀಕ್ಷೆಯನ್ನು ರದ್ದುಪಡಿಸುವ ಅಥವಾ ಮುಂದೂಡುವ ಬಗ್ಗೆ ವಿಶ್ವವಿದ್ಯಾಲಯ ಯಾವುದೇ ಪ್ರಕಟಣೆ ಹೊರಡಿಸಿಲ್ಲ.

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಬೆಂಗಳೂರು ನಗರ ಜಿಲ್ಲೆಯಲ್ಲಿ ಜ. 31ರವರೆಗೆ ಭೌತಿಕ ತರಗತಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೂ ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌.ಡಿ ಪದವಿಯ ಪರೀಕ್ಷೆಗಳನ್ನು ಸೋಮವಾರ ನಡೆಸಿದೆ. 50ಕ್ಕೂ ಹೆಚ್ಚು ವಿವಿಧ ಸ್ನಾತಕೋತ್ತರ ವಿಭಾಗಗಳ ಸುಮಾರು 700 ವಿದ್ಯಾರ್ಥಿಗಳು ಭೌತಿಕವಾಗಿ ನಡೆದ ಪರೀಕ್ಷೆಗೆ ಹಾಜರಾದರು. ಎಸ್‌ಎಸ್‌ಎಲ್‌ಸಿ, ಪದವಿಪೂರ್ವ ತರಗತಿ, ಎಂಜಿನಿಯರಿಂಗ್, ವೈದ್ಯಕೀಯ, ಅರೆವೈದ್ಯಕೀಯ ಕೋರ್ಸ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕೋರ್ಸ್‌ಗಳ ಭೌತಿಕ ತರಗತಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT