ಪ್ರಜಾವಾಣಿ ವಾರ್ತೆ
ಕೆ.ಆರ್.ಪುರ: ಪೂರ್ವ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹಾಯೋಗಿ ವೇಮನ 610 ನೇ ಜಯಂತೋತ್ಸವದಲ್ಲಿ ವಿಶೇಷ ತಹಶಿಲ್ದಾರ್ ನಾಗಪ್ರಶಾಂತ್ ಅವರು ರೆಡ್ಡಿ ಸಮುದಾಯದ ಜನಪ್ರತಿನಿಧಿಗಳಿಗೆ ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡದೇ ಕಾರ್ಯಕ್ರಮ ಮೊಟಕುಗೊಳಿಸಿರುವ ಕ್ರಮವನ್ನು ಖಂಡಿಸಿ ಎಂದು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ನೇತೃತ್ವದಲ್ಲಿ ರೆಡ್ಡಿ ಸಮುದಾಯದ ಮುಖಂಡರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.