×
ADVERTISEMENT
ಈ ಕ್ಷಣ :
ADVERTISEMENT

ಅನಧಿಕೃತ ಚರ್ಚ್‌ಗಳ ಸಂಖ್ಯೆ ಶೇ 40ರಷ್ಟಿದೆ: ಗೂಳಿಹಟ್ಟಿ ಶೇಖರ್

Published : 13 ಅಕ್ಟೋಬರ್ 2021, 20:10 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಚರ್ಚ್‌ಗಳ ಸಂಖ್ಯೆ ಶೇ 40 ರಷ್ಟು ಇದ್ದು, ಇವು ವ್ಯಾಪಕವಾಗಿ ಮತಾಂತರ ಕಾರ್ಯದಲ್ಲಿ ತೊಡಗಿವೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದಲ್ಲಿ ಅಧಿಕೃತ ಮತ್ತು ಅನಧಿಕೃತ ಮಿಷನರಿಗಳು ಕಾರ್ಯನಿರ್ವಹಿಸುತ್ತಿವೆ. ಇವು ಸರ್ಕಾರದಿಂದ ಪಡೆಯುತ್ತಿರುವ ಸೌಲಭ್ಯಗಳು, ಕ್ರೈಸ್ತ ಸಮುದಾಯಕ್ಕೆ ಸರ್ಕಾರ ನೀಡುತ್ತಿರುವ ಅನುದಾನ, ಅಭಿವೃದ್ಧಿ ಮತ್ತು ಕ್ಷೇಮ ಸಮಾಚಾರದ ಬಗ್ಗೆ ಸಭೆಯಲ್ಲಿ ಚರ್ಚಿ
ಸಲಾಯಿತು. ಅನಧಿಕೃತ ಚರ್ಚ್‌ಗಳು ಮನೆಗಳಲ್ಲೂ ನಡೆಯುತ್ತಿವೆ. ಈ ಎಲ್ಲ ವಿಷಯಗಳ ಬಗ್ಗೆ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಮಾಹಿತಿಯನ್ನು ಕೇಳಲಾಗಿದೆ ಎಂದೂ ಅವರು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಮಾತನಾಡಿ, ಲಂಬಾಣಿ ಜನಾಂಗದವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಲಂಬಾಣಿ ಭಾಷೆಯಲ್ಲೇ ಬೈಬಲ್‌ ಮುದ್ರಿಸಿ ಹಂಚಲಾಗುತ್ತಿದೆ ಎಂದರು. ಸಭೆಯಲ್ಲಿ ಶಾಸಕರಾದ ಪುಟ್ಟರಂಗ ಶೆಟ್ಟಿ, ವಿರೂಪಾಕ್ಷಪ್ಪ ಬಳ್ಳಾರಿ, ರಾಜೇಶ್‌ ನಾಯ್ಕ್, ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌ ಅವರೂ ಇದ್ದರು.

ರಾಜ್ಯದಲ್ಲಿ ಅನಧಿಕೃತ ಚರ್ಚ್‌ಗಳ ಸಂಖ್ಯೆ ಶೇ 40 ರಷ್ಟು ಇದ್ದು, ಇವು ವ್ಯಾಪಕವಾಗಿ ಮತಾಂತರ ಕಾರ್ಯದಲ್ಲಿ ತೊಡಗಿವೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT