×
ADVERTISEMENT
ಈ ಕ್ಷಣ :
ADVERTISEMENT

‘ರಾಷ್ಟ್ರೀಯ ಶಿಕ್ಷಣ ನೀತಿ ವ್ಯಾಪ್ತಿಗೆ ವೈದ್ಯಕೀಯ ಶಿಕ್ಷಣ ಇಲ್ಲ‘

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟನೆ
ಫಾಲೋ ಮಾಡಿ
Comments

ಬೀದರ್‌: ‘ಕಾನೂನು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ರಾಷ್ಟ್ರಿಯ ಶಿಕ್ಷಣ ನೀತಿ-2020 ಅನ್ನು ಜಾರಿಗೊಳಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ನಗರದ ಗುರುನಾನಕ್ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟೀಯ ಶಿಕ್ಷಣ ನೀತಿ-2020ರ ಉದ್ಘಾಟನಾ ಕಾರ್ಯಕ್ರಮದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಹೊಸ ಶಿಕ್ಷಣ ನೀತಿಯಲ್ಲಿ ಕೆಲವು ಖಾಸಗಿ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಸೌಕರ್ಯ ಒದಗಿಸಲು ಅವಕಾಶ ನೀಡಲಾಗುವುದು’ ಎಂದು ಸಚಿವರು ತಿಳಿಸಿದರು.

‘ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ, ಹೊಸ ಕಾಲೇಜುಗಳ ಸ್ಥಾಪನೆ ಪ್ರಕ್ರಿಯೆಗೆ ವೇಗ ನೀಡಲಾಗುವುದು’ ಹೇಳಿದರು.

ಕೇಂದ್ರ ಸಚಿವರಾದ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಶಾಸಕರಾದ ರಹೀಂ ಖಾನ್, ಶರಣು ಸಲಗರ, ಶಶಿಲ್ ನಮೋಶಿ ಇದ್ದರು.

ಬೀದರ್‌: ‘ಕಾನೂನು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ರಾಷ್ಟ್ರಿಯ ಶಿಕ್ಷಣ ನೀತಿ-2020 ಅನ್ನು ಜಾರಿಗೊಳಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT