×
ADVERTISEMENT
ಈ ಕ್ಷಣ :
ADVERTISEMENT

ಜೆಡಿಎಸ್‌ನಿಂದ ವಿಪ್ ಜಾರಿ

Last Updated 18 ಜನವರಿ 2022, 5:15 IST
Comments
ಅಕ್ಷರ ಗಾತ್ರ

ಶಿಡ್ಲಘಟ್ಟ: ಜ. 19ರಂದು ಶಿಡ್ಲಘಟ್ಟ ನಗರಸಭೆ ಅಧ್ಯಕ್ಷೆ ಸಿ.ಎಂ. ಸುಮಿತ್ರಾ ರಮೇಶ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ವಿರುದ್ಧ ಶಿಡ್ಲಘಟ್ಟ ನಗರಸಭೆಯಲ್ಲಿ ಜೆಡಿಎಸ್‌ನಿಂದ ಚುನಾಯಿತರಾದ ಎಲ್ಲಾ 10 ಸದಸ್ಯರು ಮತ ಚಲಾಯಿಸಬೇಕೆಂದು ವಿಪ್‌ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶಿಡ್ಲಘಟ್ಟ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಬಿ. ವೆಂಕಟೇಶ್, ಅವಿಶ್ವಾಸ ನಿರ್ಣಯ ದಿನದಂದು ಸಾಮಾನ್ಯ ಸಭೆಯಲ್ಲಿ ಹಾಜರಿದ್ದು, ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಬೇಕೆಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರ ಪರವಾಗಿ ವಿ‍ಪ್‌ ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ.

ವಿಪ್‌ ಉಲ್ಲಂಘಿಸಿದರೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜ. 19ರಂದು ಶಿಡ್ಲಘಟ್ಟ ನಗರಸಭೆ ಅಧ್ಯಕ್ಷೆ ಸಿ.ಎಂ. ಸುಮಿತ್ರಾ ರಮೇಶ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ವಿರುದ್ಧ ಶಿಡ್ಲಘಟ್ಟ ನಗರಸಭೆಯಲ್ಲಿ ಜೆಡಿಎಸ್‌ನಿಂದ ಚುನಾಯಿತರಾದ ಎಲ್ಲಾ 10 ಸದಸ್ಯರು ಮತ ಚಲಾಯಿಸಬೇಕೆಂದು ವಿಪ್‌ ಜಾರಿಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT