×
ADVERTISEMENT
ಈ ಕ್ಷಣ :
ADVERTISEMENT

ಇಎಸ್‍ಐ ನೇಮಕಾತಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

ತಿದ್ದುಪಡಿಯೊಂದಿಗೆ ಅಧಿಸೂಚನೆ ಪ್ರಕಟ
Published : 20 ಜನವರಿ 2022, 17:01 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಕಾರ್ಮಿಕ ರಾಜ್ಯ ವಿಮಾ ನಿಗಮದ (ಇ.ಎಸ್.ಐ) ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವುದಕ್ಕೆ ಅವಕಾಶ ಕಲ್ಪಿಸಿ, ಹೊಸ ತಿದ್ದುಪಡಿಯೊಂದಿಗೆ ಕಾರ್ಮಿಕ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇಎಸ್‌ಐ ನೇಮಕಾತಿಯಲ್ಲಿ ಕನ್ನಡ ನಿರ್ಲಕ್ಷಿಸಿರುವ ಕುರಿತು ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ನನ್ನೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು, ನೇಮಕಾತಿಯಲ್ಲಿ ಬದಲಾವಣೆ ತಂದು, ಕನ್ನಡದಲ್ಲೇ ಪರೀಕ್ಷೆಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುವಂತೆ ಕೋರಿದ್ದರು ಎಂದು ತಿಳಿಸಿದ್ದಾರೆ.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚಿಸಿ, ಕೆಳಹಂತದ ಹುದ್ದೆಗಳ ನೇಮಕಾತಿ ಮಾಡುವಾಗ ಕರ್ನಾಟಕದಲ್ಲಿ ಹಿಂದಿ ಜೊತೆಗೆ ಕನ್ನಡದಲ್ಲಿಲ್ಲೂ ಪರೀಕ್ಷೆ ನಡೆಸಬೇಕು ಎಂದು ವಿನಂತಿಸಲಾಗಿತ್ತು. ಇದರಿಂದಾಗಿ ಡಿ.27ರಂದು ಹೊರಡಿಸಿದ್ದ ಇಎಸ್‌ಐನ ಕ್ಲರ್ಕ್, ಬೆರಳಚ್ಚುಗಾರರು ಹಾಗೂ ಮಲ್ಟಿಟಾಸ್ಕ್ ಸಿಬ್ಬಂದಿ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ತಿದ್ದುಪಡಿ ತಂದು ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಹಿಂದಿಯೊಂದಿಗೆ ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕ ರಾಜ್ಯ ವಿಮಾ ನಿಗಮದ (ಇ.ಎಸ್.ಐ) ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವುದಕ್ಕೆ ಅವಕಾಶ ಕಲ್ಪಿಸಿ, ಹೊಸ ತಿದ್ದುಪಡಿಯೊಂದಿಗೆ ಕಾರ್ಮಿಕ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT