ಅಳ್ನಾವರ: ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್ ಹೇಳಿದರು.

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಪರಿಯೋಜನೆ, ಧಾರವಾಡದ ಮಕ್ಕಳ ಸಹಾಯವಾಣಿ ಕೇಂದ್ರ ಹಾಗೂ ಬೆಳಗಾವಿ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ, ಪಟ್ಟಣ ಪಂಚಾಯ್ತಿ, ತಾಲ್ಲೂಕ ಆಡಳಿತ, ಸರ್ಕಾರಿ ಪ್ರೌಢಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮಕ್ಕಳ ಸಹಾಯವಾಣಿ ಮಾಹಿತಿ ಹಾಗೂ ತೆರೆದ ಮನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಸಹಾಯವಾಣಿ 1098, ದಿನಪೂರ್ತಿ ಲಭ್ಯವಿರುವ ಉಚಿತ ದೂರವಾಣಿ ಬಗ್ಗೆ ಮಾಹಿತಿ ಹಾಗೂ ಕೋವಿಡ್ ಸೋಂಕು ಬಾರದಂತೆ ತಡೆಯಲು ಮುಂಜಾಗ್ರತ ಕ್ರಮಗಳ ಬಗ್ಗೆ, ಮಕ್ಕಳ ಮೂಲ ಸೌಲಭ್ಯ, ಬಾಲ್ಯ ವಿವಾಹ ತಡೆಯುವ ಬಗ್ಗೆ ತಿಳಿವಳಿಕೆ ನೀಡಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮದುಸೂಧನ ಕೆರೂರ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ ಕಾರ್ಯಕ್ರಮ ಉದ್ಘಾಟಿಸಿದರು. ಪ್ರವೀಣ ಪವಾರ, ಶಿರಸ್ತೇದಾರ ಎಂ.ಜಿ. ಪತ್ತಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಸಿಆರ್‌ಪಿ ಎಂ.ಬಿ. ಹೊಸಮನಿ, ಡಿ. ತಿಪ್ಪೇಸ್ವಾಮಿ, ಅನ್ನಪೂರ್ಣ ಕೌಜಲಗಿ, ಆನಂತ ರವಳಪ್ಪನವರ, ಮಿರಾಶಿ ನಾಯರ್, ರವಿ ಬಂಡಾರಿ, ರೇಣುಕಾ ಕರಮಡಿ, ಶಿವಲೀಲಾ ಪೋಳ ಇದ್ದರು.

ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.