‘ಸುರಕ್ಷತೆಯ ದೃಷ್ಟಿಯಿಂದ ಬ್ಯಾಂಕ್ ಮತ್ತು ಎಟಿಎಂಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು. ಗ್ರಾಹಕರು ಹಾಗೂ ಸಿಬ್ಬಂದಿ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಜೊತೆಗೆ, ತುರ್ತು ಸಂದರ್ಭದ ನಿರ್ವಹಣೆಗಾಗಿ ಅಲಾರಾಂ ವ್ಯವಸ್ಥೆ ಅಥವಾ ಪ್ಯಾನಿಕ್ ಸ್ವಿಚ್‌ಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಪೊಲೀಸ್ ಕಮಿಷನರ್ ಲಾಭೂ ರಾಮ್ ಸೂಚನೆ ನೀಡಿದರು.