ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಜಿ.ಕೆ. ಗೋವಿಂದರಾವ್ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರದ್ದು ಬಹುಮಖ ಪ್ರತಿಭೆ. ಸಾಹಿತ್ಯದ ಜೊತೆಗೆ ನಾಟಕರಂಗದಲ್ಲೂ ಸಕ್ರಿಯರಾಗಿದ್ದರು. ಅವರು ಈ ನಾಡಿನ ಸಾಂಸ್ಕೃತಿಕ ಚಿಂತಕರಾಗಿದ್ದರು ಎಂದು ಸಾಹಿತಿ ಡಾ. ಶ್ಯಾಮಸುಂದರ ಬಿದರಕುಂದಿ ಹೇಳಿದರು.