ಧಾರವಾಡ: ಟಿಕಾರೆ ರಸ್ತೆಯಲ್ಲಿರುವ ಶೀತಲನಾಥ ಜೈನ ಮಂದಿರದ ಪಕ್ಕದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡದಂತೆ ಜೈನ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

‘ಜೈನ ಮಂದಿರದ ಪಕ್ಕದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡಿದರೆ ಜೈನ ಸಮುದಾಯದ ಧಾರ್ಮಿಕ ಕಾರ್ಯಗಳಿಗೆ ಹಲವು ಅಡೆತಡೆಗಳು ಉಂಟಾಗಲಿದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಫುಡ್‌ಕೋರ್ಟ್‌ನಲ್ಲಿ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇದರಿಂದ ಜೈನ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ದೇವಸ್ಥಾನದ ಆವರಣದಲ್ಲಿ ಜೈನ ಸಾಧು, ಸಾದ್ವಿಗಳು ವಸತಿ ಮಾಡುತ್ತಾರೆ. ನಿರಂತರವಾಗಿ ಈ ದೇವಸ್ಥಾನದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತವೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ಫುಡ್‌ಕೋರ್ಟ್‌ಗೆ ತಡೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಸುರೇಶ ಸೇಮಲಾನಿ, ಪ್ರಕಾಶ ಜೈನ್, ಲಲಿತ ಭಂಡಾರಿ, ಸಂಜಯ ಸೋಲಂಕಿ ಇದ್ದರು.

ಟಿಕಾರೆ ರಸ್ತೆಯಲ್ಲಿರುವ ಶೀತಲನಾಥ ಜೈನ ಮಂದಿರದ ಪಕ್ಕದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡದಂತೆ ಜೈನ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.