ಹುಬ್ಬಳ್ಳಿ: ಎಚ್.ಡಿ. ಕುಮಾರಸ್ವಾಮಿ ಒಬ್ಬ ಸುಳ್ಳುಗಾರ, ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲವೆಂದು ತೀರ್ಮಾನಿಸಿದ್ದೇನೆ. ಸುಳ್ಳುಗಾರನ ಮಾತಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆದರು.

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಹತ್ತಿಕ್ಕುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಭಾನುವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು ‘ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಹೇಳಿಕೆಗಳನ್ನು ಕೊಡುತ್ತಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಪರ ಎಂದು ನಾವು ಯಾರ ಮುಂದೆಯೂ ಸಾಬೀತು ಮಾಡುವುದು ಬೇಕಿಲ್ಲ. ಅದಕ್ಕೆ ಅಲ್ಪಸಂಖ್ಯಾತ ನಾಯಕರೇ ಉತ್ತರ ಕೊಡುತ್ತಾರೆ’ ಎಂದರು.

ಇದನ್ನೂ ಓದಿ: ಗಾಂಧೀಜಿಯವರನ್ನೇ ಬಿಡದವರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ? –ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಪ್ರಚಾರಕ್ಕೆ ಬರಬೇಡಿ ಎಂದು ಸಿ.ಎಂ. ಇಬ್ರಾಹಿಂ ಅವರಿಗೆ ಯಾರೂ ಹೇಳಿಲ್ಲ. ಇದು ಪಕ್ಷದ ಕೆಲಸ. ಮುಂದಿನ ದಿನಗಳಲ್ಲಿ ಪ್ರಚಾರಕ್ಕೆ ಬರಬಹುದು. ಆರ್‌ಎಸ್ಎಸ್ ಕೋಮುವಾದಿ ಸಂಘಟನೆ; ಹೀಗಾಗಿ ಮೊದಲಿನಿಂದಲೂ ನಾನು ಇದರ ಪ್ರಬಲ ವಿರೋಧಿ ಎಂದರು.

ಸಂಗೂರು ಸಕ್ಕರೆ ಕಾರ್ಖಾನೆ ಮುಚ್ಚಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದರು.

ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ’ಸಿ.ಎಂ. ಉದಾಸಿ ಸಂಗೂರು ಸಕ್ಕರೆ ಕಾರ್ಖಾನೆಗೆ ಅಧ್ಯಕ್ಷರಾಗಿದ್ದಾಗ ಅದು ಹಾಳಾಯಿತು. ಇದರಿಂದ ರೈತರಿಗೆ ಅನ್ಯಾಯವಾಗಿದೆ. ಇದಕ್ಕೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಹಾನಗಲ್ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಶೀಘ್ರ ಬಿಡುಗಡೆ: ಬೊಮ್ಮಾಯಿ

ಉಪಚುನಾವಣೆ ಬಳಿಕ ಇಂಧನದ ಮೇಲಿನ ತೆರಿಗೆ ಪರಿಷ್ಕರಣೆಗಾಗಿ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸುವುದಾಗಿ ಬೊಮ್ಮಾಯಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆ ಇಳಿಕೆ ಮಾಡಬೇಕು. ಬೊಮ್ಮಾಯಿ ಮೈಕ್ರೊಸ್ಕೋಪ್ ಹಾಕಿಕೊಂಡು ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡುತ್ತಾರೆಯೇ’ ಎಂದು ಚಾಟಿ ಬೀಸಿದರು.

ತಮ್ಮ ಜವಾಬ್ದಾರಿಯಿಂದ ಜಾರಿಕೊಳ್ಳಲು ಬೊಮ್ಮಾಯಿ ಆರ್ಥಿಕ ಪರಿಸ್ಥಿತಿ ಅವಲೋಕಿಸುವ ಹೇಳಿಕೆ ಕೊಟ್ಟಿದ್ದಾರೆ ಎಂದರು.

ಎಚ್.ಡಿ. ಕುಮಾರಸ್ವಾಮಿ ಒಬ್ಬ ಸುಳ್ಳುಗಾರ, ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲವೆಂದು ತೀರ್ಮಾನಿಸಿದ್ದೇನೆ. ಸುಳ್ಳುಗಾರನ ಮಾತಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.