ಗದಗ: ಆರೋಗ್ಯ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಗದುಗಿನ ಮಧ್ಯವರ್ತಿ ರಮೇಶ ಸಜ್ಜಗಾರ ಬುಧವಾರ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ವೀರಯ್ಯ ಕರವೀರಮಠ ಎಂಬುವರ ಸಂಬಂಧಿಕರಿಗೆ ರಮೇಶ ಸಜ್ಜಗಾರ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಕಿ ನೌಕರಿ ಕೊಡಿಸುವುದಾಗಿ ನಂಬಿಸಿ, ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಮೀಪ ಇರುವ ಹೋಟೆಲ್ ಒಂದರಲ್ಲಿ ₹90 ಸಾವಿರ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ರಮೇಶನನ್ನು ಹಣದ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.

ರಮೇಶ ಸಜ್ಜಗಾರನನ್ನು ವಶಕ್ಕೆ ಪಡೆದಿರುವ ಎಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಎಸ್‌ಪಿ ಬಿ.ಎಸ್.ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿಗಳಾದ ಎಂ.ವಿ.ಮಲ್ಲಾಪೂರ, ಸುರೇಶ್ ರೆಡ್ಡಿ ಅವರ ನೇತೃತ್ವದಲ್ಲಿ ಗದಗ ಎಸಿಬಿ ಇನ್‌ಸ್ಪೆಕ್ಟರ್‌ಗಳಾದ ಆರ್.ಎಫ್.ದೇಸಾಯಿ, ವೀರಣ್ಣ ಹಳ್ಳಿ, ಸಿಬ್ಬಂದಿಯಾದ ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ, ಎಂ.ಎಂ.ಅಯ್ಯನಗೌಡ್ರ, ವೀರೇಶ್ ಜೋಳದ, ಮಂಜುನಾಥ್ ಮುಳಗುಂದ, ನಾರಾಯಣರಡ್ಡಿ ವೆಂಕರಡ್ಡಿ, ವೀರೇಶ್ ಬಿಸನಳ್ಳಿ, ತಾರಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.