×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮಗಳ ಅಭ್ಯುದ್ಯಯಕ್ಕೆ ಶ್ರಮಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ಒಂದು ದಿನದ ಕಾರ್ಯಾಗಾರ
Published : 10 ಅಕ್ಟೋಬರ್ 2021, 6:00 IST
ಫಾಲೋ ಮಾಡಿ
Comments

ಜನಪ್ರತಿನಿಧಿಗಳೊಂದಿಗೆ ಸಂವಾದ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಸಚಿವ ಕೆ.ಎಸ್‌.ಈಶ್ವರಪ್ಪ, ಗ್ರಾಮಗಳಲ್ಲಿನ ಕೆರೆ, ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಿ ತುಂಬಿಸುವುದು, ಸ್ಮಶಾನಗಳ ನಿರ್ಮಾಣ, ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಶೌಚಾಲಯಗಳ ನಿರ್ಮಾಣ ಹಾಗೂ ಬಳಕೆಯಿಂದಾಗುವ ಉಪಯೋಗಗಳ ಕುರಿತು ಗ್ರಾಮಗಳ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಅಂಗನವಾಡಿ ಕೇಂದ್ರ, ಸ್ಮಶಾನ, ಆಟದ ಮೈದಾನ ಮುಂತಾದ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳುವಂತೆ ತಿಳಿಸಿದರು. ––––– 13 ಕೋಟಿ ಮಾನವ ದಿನಗಳ ಸೃಜನೆ ರಾಜ್ಯದಲ್ಲಿ ನರೇಗಾ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ದುಡಿಯುವ ಕೈಗಳಿಗೆ ಉದ್ಯೋಗ ನೀಡುವುದು ಗ್ರಾಮ ಪಂಚಾಯ್ತಿಗಳ ಆದ್ಯ ಕರ್ತವ್ಯವಾಗಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳನ್ನು ಸೃಜಿಸಿ, ಹೆಚ್ಚುವರಿ ಎರಡು ಕೋಟಿ ಮಾನವ ದಿನಗಳಿಗಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT