×
ADVERTISEMENT
ಈ ಕ್ಷಣ :
ADVERTISEMENT

‘ಸೌಹಾರ್ದ ಕದಡುವವರ ಹೆಡೆಮುರಿ ಕಟ್ಟಿ’

ನರಗುಂದದಲ್ಲಿ ಯುವಕನ ಕೊಲೆ– ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
Published : 20 ಜನವರಿ 2022, 6:41 IST
ಫಾಲೋ ಮಾಡಿ
Comments

ಗದಗ: ನರಗುಂದ ಪಟ್ಟಣದಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಗದಗ ಬೆಟಗೇರಿ ಅಂಜುಮನ್ ಎ ಇಸ್ಲಾಂ ಸಂಸ್ಥೆ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಂಜುಮನ್ ಎ ಇಸ್ಲಾಂ ಸಂಸ್ಥೆ ಅಧ್ಯಕ್ಷ ಮೊಹಮ್ಮದ ಯೂಸಫ್ ಎ. ನಮಾಜಿ ಮಾತನಾಡಿ, ‘ಜಿಲ್ಲೆಯಲ್ಲಿ ಎಲ್ಲ ಜನರು ಜಾತಿ, ಮತ, ಧರ್ಮವನ್ನು ಬಿಟ್ಟು ಸೌಹಾರ್ದದಿಂದ ಜೀವನ ನಡೆಸುತ್ತಾ ಬಂದಿದ್ದಾರೆ. ಆದರೆ, ಇತ್ತೀಚಿಗೆ ಕೋಮುವಾದಿ ಸಂಘಟನೆಗಳು ಜಿಲ್ಲೆಯ ಸೌಹಾರ್ದ ವಾತಾವರಣವನ್ನು ಹದಗೆಡಿಸುತ್ತಿದ್ದಾರೆ. ನರಗುಂದ ಪಟ್ಟಣದಲ್ಲಿ ಹಿಂದೂ ಸಮಾಜದ ಗುಂಪೊಂದು ಮುಸ್ಲಿಂ ಯುವಕರ ಮೇಲೆ ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಖಂಡನೀಯ’ ಎಂದು ಆಕ್ರೋಶ ಹೊರಹಾಕಿದರು.

‘ನರಗುಂದ ಪಟ್ಟಣದಲ್ಲಿ ಎರಡು ಸಮುದಾಯಗಳ ನಡುವೆ ನಿರಂತರ ಕೋಮು ದ್ವೇಷ ನಡೆದರೂ ಸ್ಥಳೀಯ ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯುವಕನ ಪ್ರಾಣ ಹೋಗಿದೆ. ಇನ್ನೊಬ್ಬ ಯುವಕ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವನ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಇಂತಹ ಘಟನೆ ನಡೆದರೂ ಸಚಿವರು ಮೌನರಾಗಿದ್ದಾರೆ. ಹಲವು ತಿಂಗಳುಗಳಿಂದ ಗೂಂಡಾಗಳು ಮುಸ್ಲಿಂ ಸಮುದಾಯದ ಮೇಲೆ ಒಂದಿಲ್ಲ ಒಂದು ವಿಷಯಕ್ಕೆ ವಿನಾಕಾರಣ ಜಗಳ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ನೇರವಾಗಿ ಸ್ಥಳೀಯ ಪೊಲೀಸ್‌ ಇಲಾಖೆ ಅಧಿಕಾರಿಗಳೇ ಕಾರಣರಾಗಿದ್ದಾರೆ’ ಎಂದು ಆರೋಪ ಮಾಡಿದರು.

‘ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಘಟನೆಯಲ್ಲಿ ಶಾಮೀಲಾಗಿರುವ ಎಲ್ಲರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅವರ ಹೆಡೆಮುರಿ ಕಟ್ಟಬೇಕು’ ಎಂದು ಆಗ್ರಹಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಅಬ್ದುಲ್ ಕರೀಂ ಎಚ್. ಬಳಗಾನೂರ, ಗದಗ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡ ಉಮರ್‌ ಫಾರೂಕ ಹುಬ್ಬಳ್ಳಿ, ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ, ಖಜಾಂಚಿ ಭಾಷಾಸಾಬ ಮಲ್ಲಸಮುದ್ರ, ಪ್ರಮುಖರಾದ ಅನ್ವರ್‌ ಶಿರಹಟ್ಟಿ, ಸಯ್ಯದ್‌ ಎಸ್. ಬಳ್ಳಾರಿ, ಅಬ್ದುಲ್ ಲತೀಫ ಶೇಖ ಇದ್ದರು.

ಗದಗ: ನರಗುಂದ ಪಟ್ಟಣದಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಗದಗ ಬೆಟಗೇರಿ ಅಂಜುಮನ್ ಎ ಇಸ್ಲಾಂ ಸಂಸ್ಥೆ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT