×
ADVERTISEMENT
ಈ ಕ್ಷಣ :
ADVERTISEMENT

ಅನ್ನ, ಅಕ್ಷರ, ಆಶ್ರಯ ನೀಡಿದ ಸಂತ- ಸಂಜಯ ಶೆಟ್ಟೆಣ್ಣವರ

ಜಿಲ್ಲೆಯಾದ್ಯಂತ ದಾಸೋಹ ದಿನ ಮತ್ತು ಅಂಬಿಗರ ಚೌಡಯ್ಯ ಜಯಂತಿಯ ಸರಳ ಆಚರಣೆ
ಫಾಲೋ ಮಾಡಿ
Comments

ಹಾವೇರಿ: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನದ ಅಂಗವಾಗಿ ಆಯೋಜಿಸಲಾದ ದಾಸೋಹ ದಿನಾಚರಣೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತದಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಅಂಬಿಗರ ಚೌಡಯ್ಯನವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮೂಲಕ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭಕ್ತಿಪೂರ್ವಕವಾಗಿ ನಮಿಸಿದರು.

‘ಅನ್ನ, ಅಕ್ಷರ ಹಾಗೂ ಆಶ್ರಯದ ಮೂಲಕ ತ್ರಿವಿಧ ದಾಸೋಹದ ಪರಿಕಲ್ಪನೆಯನ್ನು ಸಾಕಾರಗೊಳಿಸಿ; ಜಾತಿ, ಧರ್ಮ, ಭಾಷೆ, ಪ್ರಾಂತ್ಯ, ಲಿಂಗಬೇಧವಿಲ್ಲದೆ 111 ವರ್ಷಗಳ ತಮ್ಮ ತುಂಬು ಜೀವನದಲ್ಲಿ 80 ವರ್ಷಗಳ ಕಾಲ ತ್ರಿವಿಧ ದಾಸೋಹದ ಕೈಂಕರ್ಯದಲ್ಲಿ ನಿರತರಾಗಿದ್ದ ಸಿದ್ಧಗಂಗಾಶ್ರೀ ಪುಣ್ಯ ಸ್ಮರಣೆ ದಿನವಾದ ಜನವರಿ 21ರಂದು ‘ದಾಸೋಹ ದಿನಾಚರಣೆ’ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಇದೇ ಪ್ರಥಮಬಾರಿಗೆ ಮೊದಲ ದಾಸೋಹ ದಿನಾಚರಣೆಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ತಿಳಿಸಿದರು. 

ನರಸೀಪುರದ ಕ್ಷೇತ್ರದ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಸಹಕಾರಿ ಇಲಾಖೆ ಎಸ್.ಜಿ.ಸುಣಗಾರ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಇದ್ದರು. 

ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನದ ಅಂಗವಾಗಿ ಆಯೋಜಿಸಲಾದ ದಾಸೋಹ ದಿನಾಚರಣೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT