ಪ್ರಜಾವಾಣಿ ವಾರ್ತೆ

ಶಿಗ್ಗಾವಿ: ಪಡಿತರ ಚೀಟಿ ವಿತರಣೆಯಲ್ಲಿ ಲೋಪದೋಷ ಸರಿಪಡಿಸುವ ಮೂಲಕ ಅರ್ಹ ಪಡಿತರ ಚೀಟಿ ಹೊಂದಿದ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ನ್ಯಾಯ ನೀಡುವ ಕೆಲಸ ಮಾಡುತ್ತೇನೆ ಎಂದು ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ಅಂಗಡಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ತಾಲ್ಲೂಕು ಕಾರ್ಮಿಕರ ಸಂಘ ಮತ್ತು ಸಾರ್ವಜನಿಕರು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ಬಡಕೂಲಿಕಾರರು ಪಡಿತರ ಚೀಟಿಯಿಂದ ವಂಚಿತರಾಗಿದ್ದಾರೆ. ಅಂತವರನ್ನು ಗುರುತಿಸಿ ಕಾರ್ಡ್ ನೀಡುವ ಕೆಲಸ ಮಾಡಲಾಗುವುದು. ಹೊಸ ಸದಸ್ಯರ ಹೆಸರು ಸೇರಿಸುವುದು. ಕಾರ್ಡನಲ್ಲಿನ ಹೆಸರು ತಿದ್ದುಪಡಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ತಾಲ್ಲೂಕು ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ ಹರಿಜನ, ರವಿ ಕೋನಪ್ಪನವರ, ಮಂಜುನಾಥ ಹುಲ್ಲೆಪ್ಪನವರ, ಮಕ್ಬೂಲ್ ಬಂಕಾಪುರ, ರಾಮದಾಸ ಶೇರಖಾನಿ, ಪರಶುರಾಮ, ಸಂತೋಷ ವಾಲೀಕಾರ, ಮಹಿಳಾ ಘಟಕದ ಅಧ್ಯಕ್ಷೆ ದೇವಕ್ಕ ಕಮ್ಮಾರ, ಆಸ್ಫಕ್ ಸವಣೂರ, ಶೇಖರ ಲಮಾಣಿ ಸೇರಿದಂತೆ ಸಂಘದ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.